ಭಾರತ ಜೋಡೋ ಯಾತ್ರೆ’: ರಸ್ತೆಯಲ್ಲೇ ಪುಷ್- ಅಪ್ ಮಾಡಿದ ರಾಹುಲ್ ಗಾಂಧಿ, ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ವಿವಿಧ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ರಸ್ತೆಯಲ್ಲಿ ಪುಷ್-ಅಪ್‌ ಮಾಡಿರುವ ಫೋಟೋ ವೈರಲ್ ಆಗಿದೆ.
ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕರು ಪುಷ್-ಅಪ್‌ ಮಾಡಿರುವುದನ್ನು ಫೋಟೋದಲ್ಲಿ ಕಾಣಬಹುದು.

ಈ ಚಿತ್ರವನ್ನು ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೆವಾಲಾ ಅವರು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದು, ಒಂದು ಪೂರ್ಣ ಮತ್ತು ಎರಡು ಅರ್ಧ ಪುಷ್ ಅಪ್‌ಗಳು ಎಂದು ಬರೆದಿದ್ದಾರೆ.

ಹಿಂದಿನ ದಿನಗಳಲ್ಲಿ 75 ವರ್ಷದ ಪಕ್ಷದ ಹಿರಿಯ ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿ ಕೈ ಕೈ ಹಿಡಿದು ಓಡುತ್ತಿರುವುದನ್ನು ತೋರಿಸಿತ್ತು. ಯಾತ್ರೆಯ ಮತ್ತೊಂದು ಚಿತ್ರದಲ್ಲಿ, ಪಕ್ಷದ ಧ್ವಜವನ್ನು ಹಿಡಿದು ಡಿಕೆ ಶಿವಕುಮಾರ್ ಅವರೊಂದಿಗೆ ಗಾಂಧಿ ಓಡಿರುವ ಫೋಟೋಗಳು ವೈರಲ್ ಆಗಿವೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement