ಶೀಘ್ರದಲ್ಲೇ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ಡಾ.ಸುಧಾಕರ

ಕಾರವಾರ: ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ‌ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ.
ಕಾರವಾರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಟಾಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಗೆ ತೆರಳುತ್ತಿದ್ದು, ಸ್ಥಳ ಯೋಗ್ಯವಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಮಂಜೂರಾತಿ ಪಡೆದು ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತೇವೆ. ಇಡೀ‌ ಜಿಲ್ಲೆಯ ಜನರಿಗೆ ಉಪಯೋಗ ಆಗುವಂತಹ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಖಾಸಗಿ ಬಗ್ಗೆ ನಾವೆಲ್ಲೂ ಮಾತನಾಡಿಲ್ಲ. ಖಾಸಗಿಯವರು ನೋಡಿಕೊಂಡು ಹೋಗಿದ್ದರೆ ಅದು ನನಗೆ ಗೊತ್ತಿಲ್ಲ. ಆದರೆ ಒಟ್ಟಾರೆ ಜನತೆಯ ಬೇಡಿಕೆಯಂತೆ ಅಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆಯೂ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಸುಧಾಕರ ಅವರು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಶಿವರಾಮ ಹೆಬ್ಬಾರ ಹಾಗೂ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ್ದರು. ಹಾಗೂ ಶೀಘ್ರವೇ ಉತ್ತರ ಕನ್ನಡಕ್ಕೆ ಆಗಮಿಸಿ ಸ್ಥಳ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು. ಹಾಗೂ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement