ಬಾಬಾ ಬುಡನ್‌ಗಿರಿ-ದತ್ತಾತ್ರೇಯ ಪೀಠ: ಪ್ರತಿ ಆಕ್ಷೇಪಣೆಗೆ ರಾಜ್ಯ ಸರ್ಕಾರಕ್ಕೆ ಮೂರು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಹಿಂದೂ ಧರ್ಮಗಳು ಹಾಗೂ ಇಸ್ಲಾಂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಎತ್ತಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಮೂರು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವರದಿ ಪ್ರಕಾರ, ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಕೀಲರು “ಸಚಿವ ಸಂಪುಟ ನಿರ್ಣಯಕ್ಕೆ ಮೇಲ್ಮನವಿದಾರರು ಆಕ್ಷೇಪಣೆ ಸಲ್ಲಿಸಿದ್ದಾರೆ. ಅದಕ್ಕೆ ಸರ್ಕಾರ ಪ್ರತಿ ಆಕ್ಷೇಪಣೆ ಸಲ್ಲಿಸಲಿದ್ದು, ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ಪೀಠವು ಮೂರು ವಾರದಲ್ಲಿ ಪ್ರತಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠವು ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಸೈಯದ್ ಗೌಸ್ ಮೊಹಿಯುದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆಪ್ಟೆಂಬರ್‌ 28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿಯುದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement