ಉಡುಪಿ : ನಟ ರಮೇಶ ಅರವಿಂದ ಅವರು ಯಕ್ಷಗಾನ ನಟರಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಯ ಹಲವು ದಿನಗಳ ಕನಸನ್ನು ಕೊನೆಗೂ ನನಸು ಮಾಡಿಕೊಂಡಿದ್ದಾರೆ.
ಉಡುಪಿಯ ಪ್ರವಾಸದಲ್ಲಿರುವ ರಮೇಶ್ ಅರವಿಂದ್ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷವನ್ನು ಹಾಕಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ವೇಷ ಮತ್ತು ಬಣ್ಣಗಾರಿಕೆಯನ್ನು ಕಲಾವಿದ ಶೈಲೇಶ್ ವ್ಯವಸ್ಥೆ ಮಾಡಿದ್ದರು. ಅಂತರಾಷ್ಟ್ರೀಯ ಛಾಯಾಗ್ರಾಹಕ ಫೋಕಸ್ ರಾಘು , ರಮೇಶ್ ಅರವಿಂದ್ ಅವರ ಫೋಟೋ ಶೂಟ್ ಮಾಡಿದ್ದಾರೆ.
ಯಕ್ಷಗಾನ ಕಲೆಯ ಬಗ್ಗೆ ಅಪಾರ ಪ್ರೀತಿ ಹಾಗೂ ಅಭಿಮಾನ ಹೊಂದಿರುವ ನಟ ರಮೇಶ ಅವರು, ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್ ಕೊನೆಗೂ ಬಹುದಿನಗಳ ತಮ್ಮೆ ಆಸೆಯಾದ ಯಕ್ಷಗಾನ ವೇಷ ತೊಟ್ಟು ಸಂಭ್ರಮಿಸಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ, ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ. ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅವರು ಸಾಂಪ್ರದಾಯಿಕ ಬಡಗುತಿಟ್ಟಿನ ಯಕ್ಷಗಾನದ ವೇಷ ಧರಿಸಿದ್ದಾರೆ.
ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರು ಮನೆ ಅವರೊಂದಿಗೆ ಸ್ವರ್ಣಾ ನದಿಯಲ್ಲಿರುವ ಫೋಕಸ್ ರಾಘು ಅವರ ಕುದ್ರು ನೆಸ್ಟ್ ಭೇಟಿ ನೀಡಿದ್ದರು. ಈ ವೇಳೆ ಯಕ್ಷಗಾನದ ವೇ಼ಷ ಧರಿಸಿ ಸಂಭ್ರಮಪಟ್ಟರು.
ನಿಮ್ಮ ಕಾಮೆಂಟ್ ಬರೆಯಿರಿ