ಕರ್ನಾಟಕ ಹಿಜಾಬ್ ನಿಷೇಧ : ನಾಳೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ ಸಾಧ್ಯತೆ

ನವದೆಹಲಿ: ಹಿಜಾಬ್ ನಿಷೇಧ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್‌ ತೀರ್ಪು ಗುರುವಾರ (ಅಕ್ಟೋಬರ್ 13) ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕ ಸರ್ಕಾರವು ರಾಜ್ಯದ ಶಾಲೆ – ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಬಳಿಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮುಕ್ತಾಯವಾಗಿದ್ದು, ತೀರ್ಪನ್ನು ಕಾಯ್ದಿರಿಸಿತ್ತು. ತೀರ್ಪು ನಾಳೆ, ಗುರುವಾರ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಲೈವ್‌ ಲಾ.ಕಾಮ್‌ ವರದಿ ಮಾಡಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಅವರನ್ನೊಳಗೊಂಡ ನ್ಯಾಯ ಪೀಠವು ಹಿಜಾಬ್ ನಿಷೇಧ ವಿಚಾರದ ಕುರಿತಾಗಿ 10 ದಿನಗಳ ಕಾಲ ವಿಚಾರಣೆ ನಡೆಸಿ ಸೆಪ್ಟೆಂಬರ್ 22 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅಕ್ಟೋಬರ್‌ 16ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸುಪ್ರೀಂಕೋರ್ಟ್ ಹಿಜಬ್ ವಿವಾದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸುವ ಸಾಧ್ಯತೆ ಎಂದು ಹೇಳಲಾಗಿದೆ.
ಶಾಲೆ – ಕಾಲೇಜುಗಳಲ್ಲಿ ಸಮಾನತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರುವರಿ 5, 2022ರಂದು ಯಾವುದೇ ಧರ್ಮದ ಸಂಕೇತ ಸೂಚಕವಾದ ಬಟ್ಟೆಗಳನ್ನು ಶಾಲೆ – ಕಾಲೇಜುಗಳ ತರಗತಿ ಒಳಗೆ ಧರಿಸದಂತೆ ಆದೇಶ ಹೊರಡಿಸಿತ್ತು.

ಪ್ರಮುಖ ಸುದ್ದಿ :-   ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement