ಮುಂದಿನ ತಿಂಗಳಿಂದ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿದಿನ ವಿಮಾನ ಹಾರಾಟ

ಹುಬ್ಬಳ್ಳಿ: ಹುಬ್ಬಳ್ಳಿ – ದೆಹಲಿ ನಡುವೆ ಪ್ರತಿದಿನ ವಿಮಾನಯಾನ ನವೆಂಬರ್ 14ರಿಂದ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳೊಂದಿಗೆ ನಡೆಸಿದ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ.
ಇಂಡಿಗೋ ಏರ್‌ಲೈನ್ಸ್‌ ಅಧಿಕಾರಿಗಳು ಪ್ರತಿದಿನ ದೆಹಲಿ-ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ-ದೆಹಲಿ ನಡುವೆ ವಿಮಾನಯಾನ ಆರಂಭಿಸಲಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ವಿಮಾನ ಸೌಲಭ್ಯ ಮಾಡಲಾಗಿದೆ ಎಂದು ಕೇಂದ್ರ ಸಚಿವರ ಕಚೇರಿ ತಿಳಿಸಿದೆ.

ಇಂಡಿಗೋ ವಿಮಾನ ಪ್ರತಿದಿನ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಖ್ಯೆ 6ಇ 5625 ಬೆಳಿಗ್ಗೆ 10ಕ್ಕೆ ಹೊರಟು ಹುಬ್ಬಳ್ಳಿಯನ್ನು 12:45 ಕ್ಕೆ ತಲುಪಲಿದೆ. ಮರಳಿ ಮಧ್ಯಾಹ್ನ 1:15 ಕ್ಕೆ ಹುಬ್ಬಳ್ಳಿಯಿಂದ ಹೊರಟು 3:45ಕ್ಕೆ ದೆಹಲಿ ತಲುಪಲಿದೆ.ಇಂಡಿಗೋ ಸಂಸ್ಥೆ ಪ್ರಯಾಣಿಕರ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಈ ಸಂಸ್ಥೆಯೊಂದಿಗಿನ ನಿರಂತರ ಸಂಪರ್ಕಕ್ಕೆ ಸೂಕ್ತ ಸ್ಪಂದನೆ ದೊರೆತಿದೆ. ಈ ವಿಮಾನ ಸೇವೆ ಆರಂಭದಿಂದ ಉತ್ತರ ಕರ್ನಾಟದ ಜನತೆಗೆ ರಾಷ್ಟ್ರದ ರಾಜಧಾನಿ ತಲುಪಲು ಅನುಕೂಲವಾಗಲಿದೆ. ದೇಶದ ಬೇರೆ ಬೇರೆ ಸ್ಥಳಗಳಿಗೆ ಹುಬ್ಬಳ್ಳಿಯಿಂದ ಹೆಚ್ಚಿನ ವಿಮಾನಯಾನ ಸಂಪರ್ಕದಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಚಾಲನೆಯೂ ದೊರಕಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement