ಕೆಎಸ್‌ಪಿ ನೇಮಕಾತಿ-2022: ಒಟ್ಟು 1591 ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್​ ಕಾನ್ಸ್​ಟೇಬಲ್‌ಗಳ ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರುಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 21 ಆಗಿದೆ.
ಈ ಹುದ್ದೆಗಳಲ್ಲಿ 454 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಯ ಹೆಸರು -ಸಿವಿಲ್ ಪೊಲೀಸ್ ಕಾನ್ಸ್ಟೇಬಲ್
ಒಟ್ಟು ಹುದ್ದೆಗಳು -1591
ಮಾಸಿಕ ವೇತನ 23500-47650 ರೂ.ಗಳು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದುಆರಂಭ: 20 ಅಕ್ಟೋಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ನವೆಂಬರ್ 2022

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ ಅರ್ಹತೆ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು ಮೀರಿರಬಾರದು. ಪ.ಜಾ, ಪ.ಪಂ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷಗಳು ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ:ಪ.ಜಾ .ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 200 ರೂ. ಹಾಗೂ ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 400 ರೂ.ಗಳು
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್
ಈ ಬಗ್ಗೆ ಪ್ರಮುಖ ಲಿಂಕ್‌ಗಳು
ಸಿವಿಲ್ ಪಿಸಿ ಎನ್‌ಎಚ್‌ಕೆ ಅಧಿಕೃತ ಅಧಿಸೂಚನೆ: ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ ನೋಡಿ- https://drive.google.com/file/d/1QbQdW0oLLfW3J-DrRbMC8FmsyNq7us19/view
ಸಿವಿಲ್ ಪಿಸಿ ಎಚ್‌ಕೆ ಅಧಿಕೃತ ಅಧಿಸೂಚನೆ: ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ ನೋಡಿ-https://drive.google.com/file/d/1RRScQzmDYNq-3iS2DN47zHyWUoXGEgXT/view
ಅಧಿಕೃತ ವೆಬ್​ಸೈಟ್​: http://ksp.karnataka.gov.in

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement