ಬಲವಂತದಿಂದ ಮತಾಂತರಕ್ಕೆ ಯತ್ನ ಆರೋಪ : ಮಾಜಿ ಕಾರ್ಪೊರೇಟರ್‌ ಸೇರಿ ಮೂವರ ಬಂಧನ

ಬೆಂಗಳೂರು: ಮಂಡ್ಯ ಜಿಲ್ಲೆಯ ಯುವಕನೊಬ್ಬನನ್ನು ಕರೆದೊಯ್ದು ಬಲವಂತದಂದ ಖತ್ನಾ ಮಾಡಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಲಾಗಿದೆ ಎಂಬ ಆಪಾದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಠಾಣೆ ಪೊಲೀಸರು ಮಾಜಿ ಕಾರ್ಪೊರೇಟರ್‌ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ನಿವಾಸಿ ಶ್ರೀಧರ ಎಂಬವರನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳಾದ ಮಾಜಿ ಕಾರ್ಪೊರೇಟರ್ ಅನ್ವರ್ ಪಾಷಾ, ನಯಾಜ್ ಪಾಷಾ ಮತ್ತು ಹಾಜೀ ಸಾಬ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement