ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ರಾಜ್ಯದ ಹಲವೆಡೆ ಮುಂದಿನ ನಾಲ್ಕೈದು  ದಿನಗಳ ಕಾಲ ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲುವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಚಲನೆಯಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಗುಡುಗು ಮತ್ತು ಮಿಂಚುಗಳ ಸಹಿತ ಭಾರೀ ಮಳೆಯಾಗಲಿದೆ. ಇದು ಮುಂದಿನ ಸೋಮವಾರದ ವರೆಗೆ (ಅಕ್ಟೋಬರ್ 13-17) ಮುಂದುವರಿಯಲಿದೆ.

ಬೆಂಗಳೂರಿನಲ್ಲಿರುವ IMD ಯ ಪ್ರಾದೇಶಿಕ ಕೇಂದ್ರವು ಅಕ್ಟೋಬರ್ 13ರಂದು ಕಲಬುರ್ಗಿ, ಯಾದಗಿರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮೀಣಕ್ಕೆ ಹಳದಿ ಅಲರ್ಟ್‌ ನೀಡಿದೆ.
ಶುಕ್ರವಾರ, ಅಕ್ಟೋಬರ್ 14ರಂದು ಬೆಳಗಾವಿ, ಧಾರವಾಡ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮೀಣಕ್ಕೆ ಹಳದಿ ಮುನ್ನೆಚ್ಚರಿಕೆ ನೀಡಿದೆ. ಶನಿವಾರ, ಅಕ್ಟೋಬರ್ 15ರಂದು ತುಮಕೂರು, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮುನ್ನೆಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 1 ಮತ್ತು 12 ರ ನಡುವೆ, ಕರ್ನಾಟಕದಲ್ಲಿ 86.8 ಮಿಮೀ ಮಳೆಯಾಗಿದೆ. ಇದು ಈ ತಿಂಗಳ ಸರಾಸರಿ ಮಳೆಗೆ ಹೋಲಿಸಿದರೆ 33% ‘ಹೆಚ್ಚುವರಿ’ ಮಳೆಯಾಗಿದೆ ಎಂದು ಗುರುತಿಸಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement