ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೂ ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯಲಿದೆ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಕರ್ನಾಟಕ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಿಚಾರದಲ್ಲಿ ಸುಪ್ರೀಂಕೋರ್ಟ್ ವಿಭಜಿತ ತೀರ್ಪು ನೀಡಿದ್ದು, ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡುವವರೆಗೆ ಹಿಜಾಬ್ ನಿಷೇಧವನ್ನು ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು, ಸುಪ್ರೀಂಕೋರ್ಟ್ ತೀರ್ಪು ನೀಡುವವರೆಗೆ ತಮ್ಮ ಆದೇಶಕ್ಕೆ ಬದ್ಧರಾಗಿರುತ್ತೇವೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಇರುವುದಿಲ್ಲ. ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧಕ್ಕೆ ಅವಕಾಶ ನೀಡಿರುವ ಹೈಕೋರ್ಟ್‌ ಆದೇಶವನ್ನು ಮುಂದುವರಿಸುತ್ತೇವೆ. ವಿದ್ಯಾರ್ಥಿಗಳು ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ನಿಗದಿತ ಸಮವಸ್ತ್ರದಲ್ಲಿ ಬರಬೇಕು ಎಂದು ಅವರು ಹೇಳಿದರು.

ಹಿಜಾಬ್ ನಿಷೇಧದ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅನುಮತಿ ನೀಡಿದ್ದಾರೆ. ಹೀಗಾಗಿ ಈಗ ಈ ವಿಷಯವನ್ನು ಈಗ ಸುಪ್ರೀಂಕೋರ್ಟ್‌ನ ವಿಸ್ತೃತಪೀಠಕ್ಕೆ ವರ್ಗಾಯಿಸಲಾಗಿದೆ.
ಉತ್ತಮ ತೀರ್ಪು ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ನಾಗೇಶ್ ಹೇಳಿದ್ದಾರೆ. ವಿಭಜಿತ ತೀರ್ಪಿನಿಂದಾಗಿ ಪ್ರಕರಣ ಈಗ ಉನ್ನತ ಪೀಠಕ್ಕೆ ಹೋಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲ. ಅದೇ ಆಧಾರದಲ್ಲಿ ಹಿಜಾಬ್ ಧರಿಸದೇ ಬರಬೇಕು ಎಂದು ಸಚಿವರು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement