ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರು ಅಡ್ಡಗಟ್ಟಿ ತಲವಾರ್‌ ಝಳಪಿಸಿದ ದುಷ್ಕರ್ಮಿಗಳು

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ಮಂಗಳೂರು ಹೊರವಲಯದ ಪರಂಗಿಪೇಟೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರು ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.
ಬೆಳ್ತಂಗಡಿಗೆ ಶಾಸಕ ಹರೀಶ ಪೂಂಜಾ ತನ್ನ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ರಾತ್ರಿ ತೆರಳುತ್ತಿದ್ದರು. ಮತ್ತೊಂದು ಕಾರಿನಲ್ಲಿ ಬಂದಿದ್ದವನು ಪರಂಗಿಪೇಟೆ ಬಳಿ ಈ ಕಾರನ್ನು ಹಿಂದಿಕ್ಕಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ 11:30ರ ವೇಳೆಗೆ ಈ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಹರೀಶ್‌ ಪೂಂಜಾ ಅವರ ಕಾರು ಚಾಲಕ ನವೀನ್‌ ದೂರು ನೀಡಿದ್ದಾರೆ.

ಗುರುವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಹರೀಶ ಪೂಂಜಾ ಸರ್ಕೂಟ್ ಹೌಸ್‌ಗೆ ಹೋಗಿದ್ದರು. ರಾತ್ರಿ ಅಲ್ಲಿಂದ ಶಾಸಕರು ತಮ್ಮ ಸಂಬಂಧಿಕರಾದ ಪ್ರಶಾಂತ್‌ ಮತ್ತು ಕುಶಿತ್ ಅವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳಿದ್ದರು. ನಾನು ಆ ಕಾರನ್ನು ಹಿಂಬಾಲಿಕೊಂಡು ಬರುತ್ತಿದ್ದೆ. ನಾಗುರಿ ರೈಲ್ವೇ ಸೇತುವೆಯ ಬಳಿ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರು ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ನಾನು ಫೋನ್‌ ಮೂಲಕ ಶಾಸಕರಿಗೆ ಈ ವಿಚಾರ ತಿಳಿಸಿದೆ.
ಪರಂಗಿಪೇಟೆ ಮೀನು ಮಾರ್ಕೆಟ್ ನ ಸ್ವಲ್ಪ ಮುಂದಕ್ಕೆ ತಲುಪುತ್ತಿದ್ದಂತೆ ರಾತ್ರಿ 11:15ರ ವೇಳೆ ಶಾಸಕರಿದ್ದ ಕಾರಿಗೆ ಅಡ್ಡಲಾಗಿ ಬಂದು ಬೈದು ತನ್ನ ಕೈಯಲ್ಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಹಾಕಿ ಕಾರನ್ನು ರಭಸವಾಗಿ ಬಿಸಿ ರೋಡು ಕಡೆಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement