ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿಯಿತು ವಿಶ್ವದ ದೊಡ್ಡ ವಿಮಾನ

ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು, ಶುಕ್ರವಾರ ಪ್ರಪಂಚದ ಅತಿ ದೊಡ್ಡ ವಿಮಾನ ಎ380( ಸೂಪರ್‌ಜಂಬೋ ಬಂದಿಳಿದಿದೆ.
ದುಬೈನಿಂದ( ಬೆಳಗ್ಗೆ 10:30ಕ್ಕೆ ಹೊರಟ ಎಮಿರೇಟ್ಸ್‌ ವಿಮಾನ ಮಧ್ಯಾಹ್ನ 3:30ಕ್ಕೆ ಬೆಂಗಳೂರು ತಲುಪಿತು. ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆದ ಎರಡನೇ ನಿಲ್ದಾಣ ಬೆಂಗಳೂರು ಆಗಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್‌ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆ ನೀಡಿತ್ತು. ಈ ಡಬ್ಬಲ್‌ ಡೆಕ್ಕರ್‌ ವಿಮಾನದಲ್ಲಿ ಎಕಾನಮಿ, ಬಿಸಿನೆಸ್‌, ಫಸ್ಟ್‌ ಕ್ಲಾಸ್‌ ಟಿಕೆಟ್‌ ಲಭ್ಯವಿದೆ.

ಬೋಯಿಂಗ್‌ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದು. ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್‌ಬಸ್‌ ಕಂಪನಿ ಅಭಿವೃದ್ಧಿ ಪಡಿಸಿದ ಏರ್‌ಬಸ್‌ 380 ವಿಮಾನ ಸೇವೆಯನ್ನು ಎಮಿರೇಟ್ಸ್‌ ನೀಡುತ್ತಿದೆ. 1985ರಿಂದ ಎಮಿರೇಟ್ಸ್‌ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ.

2003 ರಲ್ಲಿ ಏರ್‌ಬಸ್‌ ಕಂಪನಿ ಒಟ್ಟು 254 ವಿಮಾನಗಳನ್ನು ಉತ್ಪಾದನೆ ಮಾಡಲಾಗಿದೆ. ಒಟ್ಟು 72.75 ಮೀಟರ್‌ ಉದ್ದ, 24.45 ಮೀಟರ್‌ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸುವ ಸಾಮರ್ಥ್ಯವಿದೆ. ಆದರೆ ಈವರೆಗೂ ಯಾವ ಕಂಪನಿಯ ವಿಮಾನಗಳು ಈ ಸಂಖ್ಯೆಯ ಪ್ರಯಾಣಿಕರನ್ನು ಸಾಗಿಸಿಲ್ಲ.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement