ಜ್ಞಾನವಾಪಿ ಮಸೀದಿ ವಿವಾದ: ‘ಶಿವಲಿಂಗ’ ರಚನೆಯ ಕಾರ್ಬನ್ ಪರೀಕ್ಷೆಗೆ ಅನುಮತಿ ನಿರಾಕರಿಸಿದ ವಾರಾಣಸಿ ಕೋರ್ಟ್

ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ‘ಶಿವಲಿಂಗ’ದ ಯಾವುದೇ ಕಾರ್ಬನ್ ಡೇಟಿಂಗ್‌ಗೆ ಅನುಮತಿಸಲಾಗುವುದಿಲ್ಲ ಎಂದು ವಾರಾಣಸಿ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ.
ಜ್ಞಾನವಾಪಿ ಮಸೀದಿಯ ವಝುಖಾನಾ ಅಥವಾ ಜಲಾಶಯದೊಳಗೆ ಪತ್ತೆಯಾದ ಶಿವಲಿಂಗ ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್‌ಗೆ ಒತ್ತಾಯಿಸಿ ಹಿಂದೂ ಕಡೆಯವರು ಸಲ್ಲಿಸಿದ ಮನವಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಜಿಲ್ಲಾ ನ್ಯಾಯಾಧೀಶ ಡಾ.ಎ.ಕೆ.ವಿಶ್ವೇಶ ಆದೇಶ ಹೊರಡಿಸಿದ್ದಾರೆ. ಶಿವಲಿಂಗ ಪತ್ತೆಯಾದ ಸ್ಥಳವನ್ನು ರಕ್ಷಣೆ ಮಾಡುವಂತೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ನ್ಯಾಯಾಧೀಶರು ಉಲ್ಲೇಖಿಸಿದರು. ಆ ಹಿನ್ನೆಲೆಯಲ್ಲಿ ವೈಜ್ಞಾನಿಕ ತನಿಖೆಗೆ ಅವಕಾಶ ನೀಡುವಂತಿಲ್ಲ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಮೇ 16 ರಂದು ಸರ್ವೆ ಕಾರ್ಯದ ವೇಳೆ ಮಸೀದಿಯ ವಝೂಖಾನಾ ಅಥವಾ ಜಲಾಶಯದಲ್ಲಿ ಕಂಡುಬಂದ “ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಮತ್ತು ಇತರ ವೈಜ್ಞಾನಿಕ ಪರೀಕ್ಷೆಗಳನ್ನು ನಡೆಸಲು ಕೋರಿ ಹಿಂದೂ ಪಕ್ಷದವರು ಅರ್ಜಿ ಸಲ್ಲಿಸಿದ್ದರು.

ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಆರಾಧಕರು ಸಲ್ಲಿಸಿದ ಮನವಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.
ವಕೀಲ ಕಮಿಷನರ್ ಸಮೀಕ್ಷೆಯ ನಂತರ ಸ್ಥಳದಲ್ಲಿ ಪತ್ತೆಯಾದ ವಸ್ತುವು ಶಿವಲಿಂಗವಾಗಿದ್ದು ಅದು ಹಿಂದೂ ಭಕ್ತರ ಆರಾಧನೆಯ ವಸ್ತುವಾಗಿದೆ ಮತ್ತು ಅನಾದಿ ಕಾಲದಿಂದಲೂ ಪ್ರಶ್ನಾರ್ಹ ಆವರಣದಲ್ಲಿ ಅಸ್ತಿತ್ವದಲ್ಲಿದೆ ಎಂದು ಹಿಂದೂ ಪಕ್ಷಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು.ಈ ಹಿನ್ನೆಲೆಯಲ್ಲಿ ಸಂಪೂರ್ಣ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಮತ್ತು ಹೆಚ್ಚಿನ ಸಂಖ್ಯೆಯ ಶಿವನ ಆರಾಧಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ನ್ಯಾಯಾಲಯವು ಎಎಸ್‌ಐಗೆ ಅದರ ಸ್ವರೂಪ ಮತ್ತು ವಯಸ್ಸನ್ನು ಕಂಡುಹಿಡಿಯುವಂತೆ ನಿರ್ದೇಶಿಸುವುದು ಅಗತ್ಯ ಎಂದು ವಾದಿಸಲಾಯಿತು. ಪ್ರಕರಣದ ಸರಿಯಾದ ತೀರ್ಪಿಗಾಗಿ ಶಿವಲಿಂಗದ ವಯಸ್ಸು, ಮತ್ತು ಘಟಕಗಳ ಬಗ್ಗೆ ವೈಜ್ಞಾನಿಕ ತನಿಖೆ ನಡೆಸುವುದು ಅವಶ್ಯಕ” ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
ಅಕ್ಟೋಬರ್ 7 ರಂದು, ನ್ಯಾಯಾಲಯವು ತನ್ನ ಆದೇಶವನ್ನು ಮುಂದೂಡಿತು ಮತ್ತು ಮಸೀದಿ ಸಮಿತಿಯು ನ್ಯಾಯಾಲಯವು ಎತ್ತಿದ ಕೆಳಗಿನ ಎರಡು ಸ್ಪಷ್ಟೀಕರಣಗಳಿಗೆ ಪ್ರತಿಕ್ರಿಯಿಸಲು ಸಮಯ ಕೋರಿದ ನಂತರ ಅಕ್ಟೋಬರ್ 11 ಕ್ಕೆ ವಿಷಯವನ್ನು ಮುಂದೂಡಿತ್ತು.
*ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು ಸೂಟ್ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ?
*ಆಪಾದಿತ ರಚನೆಯ ‘ವೈಜ್ಞಾನಿಕ ತನಿಖೆ’ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ? ಎಂದುಈ ಪ್ರಶ್ನೆಗಳಿಗೆ ಉತ್ತರಿಸುವಂತೆ ಕೋರ್ಟ್‌ ಕೇಳಿತ್ತು.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ಹಿಂದೂ ಆರಾಧಕರ (ವಾದಿಗಳು) ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಶಿವಲಿಂಗವು ಸೂಟ್ ಆಸ್ತಿಯ ಒಂದು ಭಾಗವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ನ್ಯಾಯಾಲಯದ ಎರಡನೇ ಪ್ರಶ್ನೆಗೆ ಜೈನ್ ಅವರು ಸಿವಿಲ್ ಪ್ರೊಸೀಜರ್ ಕೋಡ್ 1908 ರ ಆದೇಶ 26 ನಿಯಮ 10A ರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದರು.
ಜ್ಞಾನವಾಪಿ ಮಸೀದಿಯ ಆವರಣದೊಳಗೆ ಪೂಜೆ ಮಾಡುವ ಹಕ್ಕನ್ನು ಕೋರಿ ಹಿಂದೂ ಭಕ್ತರು ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದಾಗ ಜ್ಞಾನವಾಪಿ ವಿವಾದವು ಪ್ರಾರಂಭವಾಯಿತು, ಇದು ಹಿಂದೂ ದೇವಾಲಯವಾಗಿದೆ ಮತ್ತು ಇನ್ನೂ ಹಿಂದೂ ದೇವತೆಗಳನ್ನು ಹೊಂದಿದೆ ಎಂದು ಅವರು ಹೇಳಿದ್ದರು. ಸಿವಿಲ್ ನ್ಯಾಯಾಲಯವು ವಕೀಲ ಕಮಿಷನರ್ ಮೂಲಕ ಮಸೀದಿಯ ಸಮೀಕ್ಷೆಗೆ ಆದೇಶಿಸಿತು. ನಂತರ ಅಡ್ವೊಕೇಟ್ ಕಮಿಷನರ್ ವಿಡಿಯೋ ಗ್ರಾಫ್ ಸರ್ವೆ ನಡೆಸಿ ಸಿವಿಲ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ಆದಾಗ್ಯೂ, ಸಿವಿಲ್ ನ್ಯಾಯಾಲಯದ ಮುಂದಿರುವ ಮೊಕದ್ದಮೆಯನ್ನು ಅದರ ಸೂಕ್ಷ್ಮತೆಯ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ಮೇ 20 ರಂದು ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿತು. ಸೆಪ್ಟಂಬರ್ 12 ರಂದು ಜಿಲ್ಲಾ ನ್ಯಾಯಾಲಯವು, ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ರ ಅಡಿಯಲ್ಲಿ ಮೊಕದ್ದಮೆಯನ್ನು ನಿರ್ಬಂಧಿಸಲಾಗಿಲ್ಲ ಎಂದು ಹೇಳಿತು.
ನಂತರ ಹಿಂದೂ ಪಕ್ಷಗಳು ಕಾರ್ಬನ್ ಡೇಟಿಂಗ್ ಕೋರಿ ನ್ಯಾಯಾಲಯದ ಮುಂದೆ ಪ್ರಸ್ತುತ ಅರ್ಜಿಯನ್ನು ಸಲ್ಲಿಸಿದವು.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಕಾರ್ಬನ್ ಡೇಟಿಂಗ್ ಎನ್ನುವುದು ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳಲ್ಲಿ ದೊರೆತ ವಸ್ತವಿನ ಕಾಲಮಾನ ಕಂಡುಹಿಡಿಯುವ ವೈಜ್ಞಾನಿಕ ಪ್ರಕ್ರಿಯೆಯಾಗಿದೆ. ಹಿಂದೂ ಕಡೆಯವರು ಸಲ್ಲಿಸಿದ್ದ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ಜ್ಞಾನವಾಪಿ ಮಸೀದಿ ಸಮಿತಿ ವಿರೋಧಿಸಿತ್ತು.ಜ್ಞಾನವಪಿ ಮಸೀದಿ ಸಮಿತಿಯು ವಸ್ತುವು ‘ಕಾರಂಜಿ’ಯ ಭಾಗವಾಗಿದೆ ಮತ್ತು ಅದು ‘ಶಿವಲಿಂಗ’ ಅಲ್ಲ ಎಂದು ಹೇಳಿತ್ತು.
ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೆಡವಲ್ಪಟ್ಟ ಹಿಂದೂ ರಚನೆಯ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ವಾದವನ್ನು ಪುನರುಜ್ಜೀವನಗೊಳಿಸುವ ಅರ್ಜಿಯನ್ನು ವಾರಾಣಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಯಿತು.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement