ಥಾಣೆ ಶಾಕರ್… : ಯುವತಿಗೆ ಕಿರುಕುಳ ನೀಡಿ, ಆಟೋದಲ್ಲಿ ಎಳೆದೊಯ್ದ ಚಾಲಕ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿಗೆ ಆಟೋರಿಕ್ಷಾ ಚಾಲಕನೊಬ್ಬ ಕಿರುಕುಳ ನೀಡಿ ವಾಹನದಲ್ಲಿ ಎಳೆದೊಯ್ದಿರುವ ಘಟನೆ ಇಂದು, ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಬೆಳಗ್ಗೆ 6:45ರ ಸುಮಾರಿಗೆ ನಡೆದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆಯು ಕಾಲೇಜಿಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ನಿಂತಿದ್ದ ಆಟೋರಿಕ್ಷಾ ಚಾಲಕನೊಬ್ಬ ಆಕೆಯ ಬಗ್ಗೆ ಕೆಲವು ಕಾಮೆಂಟ್‌ಗಳನ್ನು ಮಾಡಿದ್ದ. ನಂತರ ಆಕೆಯ ಅದನ್ನು ಪ್ರಶ್ನಿಸಿದಾಗ ಕೈ ಹಿಡಿದು ಎಳೆದಿದ್ದಾನೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಜೈರಾಜ್ ರಾಣಾವರೆ ತಿಳಿಸಿದ್ದಾರೆ. ನಗರದಲ್ಲಿ ಬೆಳಗ್ಗೆ 6:45ರ ಸುಮಾರಿಗೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಯುವತಿ ಆತನನ್ನು ಬಿಟ್ಟಿರಲಿಲ್ಲ. ಆತ ತ್ರಿಚಕ್ರ ವಾಹನವನ್ನು ಓಡಿಸಲು ಪ್ರಾರಂಭಿಸಿದಾಗಲೂ ಅವಳು ಆತನ ಕೈ ಹಿಡಿದಿದ್ದಳು ಎಂದು ಅವರು ಹೇಳಿದರು. ಆದರೂ ಚಾಲಕ ವಾಹನ ಓಡಿಸಿದ್ದರಿಂದ ಯುವತಿ ವಾಹನ ಅವಳನ್ನು ಸುಮಾರು 500 ಮೀಟರ್ ಎಳೆದೊಯದ್ದ ನಂತರ ಅವಳು ಕೆಳಕ್ಕೆ ಬಿದ್ದಿದ್ದಾಳೆ, ನಂತರ ಆರೋಪಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಯಾವುದೇ ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಆಟೊರಿಕ್ಷಾ ಚಾಲಕ ತಲೆಮರೆಸಿಕೊಂಡಿದ್ದಾನೆ.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement