ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ‌ ಕಿರುಕುಳ‌ ಆರೋಪ; ಮುರುಘಾ ಶರಣರ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲು

ಮೈಸೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಈಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಮೇಲೆ ಅವರ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಎದುರು ಪೋಷಕರೊಂದಿಗೆ ಹಾಜರಾದ ಬಾಲಕಿಯು, ಶರಣರಿಂದ ತನಗಾಗಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಳು.

ಮುರುಘಾ ಶರಣರು ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.  ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. A-1 ಶಿವಮೂರ್ತಿ ಮುರುಘಾ ಶರಣರು, A-2 ವಾರ್ಡನ್ ರಶ್ಮಿ, A-3 ಬಸವಾದಿತ್ಯ, A-4 ಪರಮಶಿವಯ್ಯ, A-5 ಗಂಗಾಧರಯ್ಯ, A-6 ಮಹಾಲಿಂಗಯ್ಯ, A-7 ಕರಿಬಸಪ್ಪ ಮೇಲೆ ಎಫ್ಐಆರ್ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿನಿಯರಿಂದ ಸಂತ್ರಸ್ತರು ಎಂದು ದೂರಿನಲ್ಲಿ ಹೇಳಲಾಗಿದೆ.ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಪ್ರಕಾರ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ದೃಢಪಡಿಸಿವೆ.
ಮುರುಘಾ ಮಠದ ಹಾಸ್ಟೆಲ್‌ನ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಯನ್ನು ಕಳೆದ ಸೆಪ್ಟಂಬರ್‌ 2ರಂದು ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು. ಮುರುಘಾ ಶ್ರೀ ವಿರುದ್ಧ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾದ ಏಳು ದಿನದ ಬಳಿಕ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಲಾಗಿತ್ತು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement