ಚಿಕ್ಕಮಗಳೂರು: ದಂಡ ಹಾಕಿದ್ದಕ್ಕೆ (Fine) ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿ ತೂರಿದ ಆರೋಪಿ ಅರವಿಂದ ನಗರ ನಿವಾಸಿ ಲೋಕೇಶ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಒಂದು ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಾ ವೇಳೆ ಆತನ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಲಾಗಿತ್ತು.
ಬಳಿಕ ಪೊಲೀಸರು ಆತನಿಗೆ ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು. ಇದಕ್ಕೆ ಆರೋಪಿ ಲೋಕೇಶ್ ದಂಡ ಕೂಡ ಕಟ್ಟಿದ್ದ. ಆದರೆ ಲೋಕೇಶ ಇಂದು, ಶುಕ್ರವಾರ ಕೋರ್ಟ್ಗೆ ಕುಡಿದು ಬಂದು, ಜಡ್ಜ್ ಮೇಲೆ ಚಪ್ಪಲಿ ತೂರಿದ್ದಾನೆ. ನಾನು ಏನು ತಪ್ಪು ಮಾಡಿದ್ದೇನೆ ಎಂದು ದಂಡ ಹಾಕಿದ್ದೀರಾ ಎಂದೆಲ್ಲ ಕೂಗಾಡಿದ್ದಾನೆ. ತಕ್ಷಣವೇ ಅಲ್ಲೇ ಇದ್ದ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
HM SADANANDA
ಕುಡಿದ ಅಮಲು ಇನ್ನೂ ಇಳಿದಿಲ್ಲವಲ್ಲ! ಏನು ತಪ್ಪಾಗಿದೆ ಎಂಬ ಅರಿವೇ ಇಲ್ಲದ ಮೂಢ!?