ಕಬ್ಬು ಬೆಲೆ ನಿಗದಿ ಸಭೆಗೆ ಕೋಡಿಹಳ್ಳಿ ಉಪಸ್ಥಿತಿಗೆ ರೈತ ಮುಖಂಡರ ಆಕ್ಷೇಪ, ಹೊರಹಾಕುವಂತೆ ಪಟ್ಟು

ಬೆಂಗಳೂರು: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸಭೆಗೆ ಆಹ್ವಾನಿಸಿದ್ದಕ್ಕೆ ಆಕ್ರೋಶಗೊಂಡ ರೈತ ಮುಖಂಡರು ಸಚಿವರ ಎದುರೇಅವರನ್ನು ಸಭೆಯಿಂದ ಹೊರ ಹಾಕುವಂತೆ ಸಚಿವರ ಎದುರೇ ಒತ್ತಾಯಿಸುವ ಘಟನೆ ನಡೆಯಿತು.
ಕಬ್ಬು ಬೆಲೆ ನಿಗದಿ ಹಾಗೂ ಬೆಳೆಗಾರರ ಸಮಸ್ಯೆಗಳನ್ನು ಚರ್ಚಿಸಲು ವಿಧಾನಸೌಧದಲ್ಲಿ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರೈತ ಮುಖಂಡರ ಸಭೆ ಕರೆದಿದ್ದರು. ಸಭೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರಿಗೆ ಆಹ್ವಾನ ನೀಡಿರಲಿಲ್ಲ. ಆದರೆ ಅವರಾಗಿಯೇ ಸಭೆಗೆ ಬಂದಿದ್ದಕ್ಕೆ ಕೆಲವು ರೈತರ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಕೆಲ ರೈತ ಮುಖಂಡರು ಕೋಡಿಹಳ್ಳಿ ಚಂದ್ರಶೇಖರ ಮೇಲೆ ಕೆಲವು ಗಂಭೀರ ಆರೋಪಗಳಿವೆ. ಅವರನ್ನು ಸಭೆಗೆ ಆಹ್ವಾನಿಸಿದ್ದು ಸರಿಯಲ್ಲ ಎಂದರು. ವಾಗ್ವಾದ ನಡೆದು ಕೋಡಿಹಳ್ಳಿ ಅವರನ್ನು ಸಭೆಯಿಂದ ಕಳುಹಿಸಬೇಕೆಂದು ಪಟ್ಟು ಹಿಡಿದರು. ಆಗ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಆರೋಪ- ಪ್ರತ್ಯಾರೋಪ ನಡೆಯಿತು.
ಕೋಡಿಹಳ್ಳಿ ಚಂದ್ರಶೇಖರ್ ಹೋರಾಟ ನಡೆಸಲ ಹಣ ಪಡೆದಿದ್ದಾರೆ ಎಂಬ ಆರೋಪವಿದೆ. ಅಂಥವರು ಸಭೆಗೆ ಬರುವುದು ಶೋಭೆಯಲ್ಲ. ಅವರನ್ನು ಹೊರಗೆ ಕಳುಹಿಸಿ ಎಂದು ಮನವಿ ಮಾಡಿದರು. ಇದಕ್ಕೆ ಸಿಡಿಮಿಡಿಗೊಂಡ ಕೋಡಿಹಳ್ಳಿ , ನನ್ನ ಮೇಲಿನ ಆರೋಪಗಳಿದ್ದರೆ ತನಿಖೆಯಾಗಲಿ ಎಂದು ಆಗ್ರಹಿಸಿದರು. ಆಗಲೂ ಕೂಡ ಆರೋಪ- ಪ್ರತ್ಯಾರೋಪಗಳು ನಡೆದು ಗೊಂದಲದ ವಾತಾವರಣ ನಡೆಯಿತು. ಬಳಿಕ ಸಚಿವರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement