ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ ಮುತಾಲಿಕ್ ಕರೆ

ಹುಬ್ಬಳ್ಳಿ: ‘ಪ್ರಸ್ತುತ ದೀಪಾವಳಿ ಸಂದರ್ಭದಲ್ಲಿ ಹಲಾಲ್ ಗುರುತು ಇರುವ ವಸ್ತುಗಳನ್ನು ನಿರಾಕರಿಸಿ ಹಲಾಲ್ ಮುಕ್ತ ದೀಪಾವಳಿ ಹಬ್ಬ ಆಚರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಕರೆ ನೀಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲಾಲ್‌ ಹಿಂದೂ ಸಂಪ್ರದಾಯ, ಸಂಸ್ಕೃತಿಗೆ ವಿರೋಧ. ಹಿಂದೂ ವ್ಯಾಪಾರಸ್ಥರಿಂದಲೇ ಖರೀದಿಸಿ ಶಾಸ್ತ್ರೋಕ್ತವಾಗಿ ಹಬ್ಬ ಆಚರಿಸಬೇಕು ಎಂದು ಹೇಳಿದರು.
ಹಲಾಲ್ ಪ್ರಮಾಣ ಪತ್ರಕ್ಕೆ ಸರ್ಕಾರದಿಂದ ಮಾನ್ಯತೆಯಿಲ್ಲ. ಆದರೂ ಜಮಾತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ಸೇರಿದಂತೆ ಕೆಲವು ಸಂಘಟನೆಗಳು ಔಷಧಿ, ಆಹಾರೋತ್ಪನ್ನ ಹಾಗೂ ಇನ್ನಿತರ ವಸ್ತುಗಳ ಮೇಲೆ ಹಲಾಲ್ ಗುರುತು ಹಾಕಲು‌ ಪ್ರಮಾಣ ಪತ್ರ ನೀಡುತ್ತಿದೆ ಎಂದರು.

ಹಲ್ದಿರಾಮ್ ಕಂಪನಿ 140 ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಅದರ ಮೇಲೂ ಹಲಾಲ್ ಗುರುತು ಇವೆ. ಕಾನೂನು ಬಾಹಿರವಾಗಿ ನೀಡುವ ಪ್ರಮಾಣ ಪತ್ರವನ್ನು ಕೇಂದ್ರ‌ ಸರ್ಕಾರ ರದ್ದು ಪಡಿಸಬೇಕು ಎಂದು ಒತ್ತಾಯಿಸಿದರ ಅವರು ಇದಕ್ಕೆ ಹಿಂದೂ ಸಂಘಟನೆಗಳ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ಹಲಾಲ್ ಉತ್ಪನ್ನದಿಂದ ಬರುವ ಆದಾಯ ಜಗತ್ತಿನಲ್ಲಿಯೇ ಆತಂಕ ಸೃಷ್ಟಿಸಿದೆ. ಅದರಿಂದ ಬಂದ ಹಣವನ್ನು ಭಯೋತ್ಪಾದನೆಗೆ ಹಾಗೂ ದೇಶದ್ರೋಹಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಹುಬ್ಬಳ್ಳಿ ಗಲಭೆಗೆ, ಕೆಜಿ ಹಳ್ಳಿ ಧಂಗೆಗೂ ಅಲ್ಲಿಂದಲೇ ಹಣ ಬಂದಿದೆ’ ಎಂದು ಮುತಾಲಿಕ್‌ ಆರೋಪಿಸಿದರು.
ಗಂಗಾಧರ ಕುಲಕರ್ಣಿ, ರೂಪಾ ಧವಲಿ, ಹನುಮಂತ ನಿರಂಜನ, ಗುರುಪ್ರಸಾದ ಗೌಡ ಮೊದಲಾದವರು ಇದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement