ರಾಷ್ಟ್ರಪತಿ ದ್ರೌಪದಿ ಮುರ್ಮು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು; ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
“…ರಾಷ್ಟ್ರಪತಿ ಮುರ್ಮು ಇಂದು, ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ…. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಾವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.
ಅಧ್ಯಕ್ಷ ಮುರ್ಮು ಅವರು ಬೆಳಿಗ್ಗೆ 11:30ಕ್ಕೆ ದೆಹಲಿ ಕ್ಯಾಂಟ್‌ನ ಆರ್ಮಿ ಹಾಸ್ಪಿಟಲ್ ರಿಸರ್ಚ್ & ರೆಫರಲ್‌ನಲ್ಲಿ ತಮ್ಮ ಎಡಗಣ್ಣಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಬ್ರಿಗೇಡಿಯರ್‌ ಎಸ್ ಕೆ ಮಿಶ್ರಾ ಮತ್ತು ಅವರ ತಂಡ ಶಸ್ತ್ರ ಚಿಕಿತ್ಸೆ ನಡೆಸಿದೆ ಎಂದು ವರದಿ ತಿಳಿಸಿದೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement