ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಳ; ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್‌ 18ರ ವರೆಗೆ ಮಳೆ ಬೀಳಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್‌ 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್ ನೀಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿ :-   ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement