ಅಪ್ಪ ವರುಣದಿಂದ ಚುನಾವಣೆಗೆ ಸ್ಪರ್ಧಿಸಿದರೆ ನಾನು ಅವರ ಪರವಾಗಿ ಕೆಲಸ ಮಾಡ್ತೇನೆ ಎಂದ ಡಾ.ಯತೀಂದ್ರ : ಸಿದ್ದರಾಮಯ್ಯ ಚಿತ್ತ ಯಾವ ಕ್ಷೇತ್ರದತ್ತ.?

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲದ ಮಧ್ಯೆಯೇ ಅವರ ಪುತ್ರ ಹಾಗೂ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದು ಸೋಮವಾರ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ನಿಚ್ಚಳವಾದಂತೆ ತೋರುತ್ತಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ತಂದೆ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ ಎಂದು ಸಾಕಷ್ಟು ಜನ ಹೇಳುತ್ತಿದ್ದಾರೆ. ತಂದೆಯವರು ಎಲ್ಲಿ ನಿಲ್ಲಬೇಕು ಎಂದು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ, ಅವರು ಎಲ್ಲಿಯೇ ನಿಲ್ಲಲು ತೀರ್ಮಾನ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧವಾಗಿದ್ದೇವೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸಿದ್ದರಾಮಯ್ಯ ಅವರು ವರುಣದಲ್ಲಿಯಾದರೂ ಸ್ಪರ್ಧಿಸಬಹುದು, ಬೇರೆ ಕಡೆಯೂ ಸೊರ್ಧಿಸಬಹುದು. ಈ ಬಗ್ಗೆ ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ, ನಾವು ಅದಕ್ಕೆ ಬದ್ಧರಾಗಿದ್ದೇವೆ. ಒಂದು ವೇಳೆ ವರುಣ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ತೆಗೆದುಕೊಂಡರೆ ನಾನು ಅವರ ಪರ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರಿಗಾಗಿ ನೀವು ಕ್ಷೇತ್ರ ಬಿಟ್ಟುಕೊಡುತ್ತೀರಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ತಂದೆ ನಿಲ್ಲುತ್ತಾರೆ ಎಂದರೆ ಬೇರೆಯವರು ಕ್ಷೇತ್ರ ಬಿಟ್ಟು ಕೊಡಲು ಸಿದ್ಧರಿರುವಂತೆಯೇ ನಾನು ಕೂಡ ಪಕ್ಷದ ಕಾರ್ಯಕರ್ತನಾಗಿ ಕ್ಷೇತ್ರ ಬಿಟ್ಟು ಸಿದ್ಧನಿದ್ದೇನೆ ಎಂದು ಹೇಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement