ಕೆರೆ ಕಟ್ಟೆಗಳ ನಿರ್ಮಾಣದ ಸರದಾರ, ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು. ಪುತ್ರಿ ಹಾಗೂ ಅಪಾರ ಬಂಧುಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ. ಕುಂದೂರು ಬೆಟ್ಟದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದರು. ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ತೋಡಿಸಿದ್ದರು.

ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.ಅನಕ್ಷರಸ್ಥರಾಗಿದ್ದ ಅವರು ಮಾಡಿರುವ ಕೆಲಸಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿತ್ತು. ತಮ್ಮ ಗ್ರಾಮದ ಪಕ್ಕದಲ್ಲಿರುವ ಕುಂದೂರು ಬೆಟ್ಟದಲ್ಲಿ ಸುಮಾರು ‌16 ಕೆರೆಗಳನ್ನು ತಮ್ಮ ಜೀವನದಲ್ಲಿ ದುಡಿದ ಸ್ವಂತ ಹಣದಲ್ಲಿ ನಿರ್ಮಿಸಿ ಅಂತರ್ಜಲ ವೃದ್ಧಿ ಮಾಡಿದ್ದಾರೆ. ಕಾಮೇಗೌಡರ ಕಾಯಕ ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ 2020ರ ‘ಮನ್‌ ಕಿ ಬಾತ್‌’ ರೇಡಿಯೋ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಶ್ಲಾಘಿಸಿದ್ದರು.

ಯೋಗ ದಿನಕ್ಕಾಗಿ ಮೈಸೂರಿಗೆ ಬಂದಿದ್ದ ಪ್ರಧಾನಿಯನ್ನು ಭೇಟಿಯಾಗುವ ಆಸೆಯನ್ನು ಕಾಮೇಗೌಡರು ವ್ಯಕ್ತಪಡಿಸಿದ್ದರು. ಆದರೆ ಅನಾರೋಗ್ಯದಿಂದ ಅದು ಅವರಿಗೆ ಸಾಧ್ಯವಾಗಿರಲಿಲ್ಲ. ಕಾಮೇ ಗೌಡರು ರಾಜ್ಯೋತ್ಸವ ಪ್ರಶಸ್ತಿ, ಬಸವ ಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement