ಕೊರೊನಾ ಸೋಂಕಿಗೆ ಒಳಗಾದರೂ ಟಿ20 ವಿಶ್ವಕಪ್ ಆಡಬಹುದು..!

ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ (T20 World Cup 2022)ನಲ್ಲಿ ಐಸಿಸಿ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್​ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಬದಲಾವಣೆ ತಂದಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್‌ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಪ್ರಕಟಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್​ನಲ್ಲಿರಿಸಬೇಕಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಬೇಕು. ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿದೆ. ಬರ್ಮಿಂಗ್‌ಹ್ಯಾಮ್‌ನಲ್ಲಿ 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆವೃತ್ತಿಯಲ್ಲಿ ಇದೇ ರೀತಿ ಮಾಡಲಾಗಿದೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ತಹ್ಲಿಯಾ ಮೆಕ್‌ಗ್ರಾತ್ ಅವರು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಭಾರತ ವಿರುದ್ಧ ಆಡಲು ಅವಕಾಶ ನೀಡಲಾಯಿತು.

ಇಂದಿನ ಪ್ರಮುಖ ಸುದ್ದಿ :-   ತನ್ನ ಮರಿಗಳೊಂದಿಗೆ ಆಟವಾಡಲು ಯತ್ನಿಸಿದ ವ್ಯಕ್ತಿ ಮೇಲೆ ಒಮ್ಮೆಲೇ ದಾಳಿ ಮಾಡಿದ ಹೆಬ್ಬಾತು ಹಕ್ಕಿ: ಬೀದಿಯಲ್ಲಿ ಓಡಿದರೂ ಬಿಡದೆ ದಾಳಿ | ವೀಕ್ಷಿಸಿ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement