ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325
ಇದರಲ್ಲಿ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 143,ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌- 116
ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಎಂಜಿನಿಯರಿಂಗ್‌-36, ಇನ್‌ಫಾರ್ಮೆಷನ್‌ ಸೈನ್ಸ್‌ ಆಂಡ್‌ ಎಂಜಿನಿಯರಿಂಗ್‌-20, ಸಿವಿಲ್‌ ಎಂಜಿನಿಯರಿಂಗ್‌-05 ಹಾಗೂ ಇನ್‌ಸ್ಟ್ರುಮೆಂಟೇಷನ್‌ ಟೆಕ್ನಾಲಜಿ ಎಂಜಿನಿಯರಿಂಗ್‌-5
ಇದು 1ವರ್ಷಕ್ಕೆ ಮಾತ್ರ ಈ ಹುದ್ದೆ ಮಿತಿಗೊಳಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9008 ರೂ. ಸ್ಟೈಪಂಡ್‌ ನೀಡಲಾಗುತ್ತದೆ.

ಟೆಕ್ನಿಷಿಯನ್‌ (ಡಿಪ್ಲೊಮಾ) ಅಪ್ರೆಂಟಿಸ್‌ಶಿಪ್‌ 75 ಹುದ್ದೆಗಳು

ಎಲೆಕ್ಟ್ರಿಲ್‌ & ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 55, ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌-10, ಕಂಪ್ಯೂಟರ್‌ ಸೈನ್ಸ್‌ & ಎಂಜಿನಿಯರಿಂಗ್‌-10 ಹೀಗೆ ಒಟ್ಟು 75 ಹುದ್ದೆಗಳಿವೆ. ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗೆ ಬಿಇ/ಬಿಟೆಕ್‌ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್‌ಶಿಪ್‌ಗೆ ಸರ್ಕಾರದ ಅಂಗೀಕೃತ ಪಾಲಿಟೆಕ್ನಿಕ್‌ಗಳಿಂದ ಮೂರು ವರ್ಷದ ಡಿಪ್ಲೊಮಾ ಪಡೆದಿರಬೇಕು.
2020, 2021, 2022ರಲ್ಲಿ ಪದವಿ/ಡಿಪ್ಲೊಮಾ ಪೂರೈಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಅಂದರೆ, 2019ರ ನಂತರ ಸಂಬಂಧಪಟ್ಟ ಪದವಿ/ಡಿಪ್ಲೊಮಾ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 15 ಅಕ್ಟೋಬರ್​ 2022ರಿಂದ ಆರಂಭ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 07 ನವೆಂಬರ್ 2022 ಕೊನೆಯ ದಿನವಾಗಿದೆ.
ನೋಂದಾಯಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಘೋಷಣೆಯ ಪಟ್ಟಿಯ ದಿನಾಂಕ: 14 ನವೆಂಬರ್ 2022
ಮಹತ್ವದ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ ನೋಡಬಹುದು-Detailed Apprentice Notification FY 2022-23
ಅಧಿಕೃತ ವೆಬ್‌ಸೈಟ್: http://bescom.org
ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಎನ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಲು ಅಕ್ಟೋಬರ್‌ 31 ಕೊನೆಯ ದಿನಾಂಕವಾಗಿದೆ. ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್‌ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್‌ 7 ಕೊನೆಯ ದಿನಾಂಕವಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement