ಚಂದ್ರಚೂಡ್ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು, ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಅನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ.
ಗೌರವಾನ್ವಿತ ರಾಷ್ಟ್ರಪತಿಗಳು ಡಾ. ಜಸ್ಟಿಸ್ ಡಿವೈ ಚಂದ್ರಚೂಡ್ ಅವರನ್ನು ನವೆಂಬರ್ 9, 22 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ ಎಂದು ರಿಜಿಜು ಟ್ವಿಟ್ಟರಿನಲ್ಲಿ ಬರೆದಿದ್ದಾರೆ. ಕಾನೂನು ಸಚಿವಾಲಯ ಕೂಡ ನಂತರ ಹೇಳಿಕೆಯನ್ನು ಹಂಚಿಕೊಂಡಿದೆ.

ಒಂದು ವಾರದ ಹಿಂದೆ ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಸುಪ್ರೀಂಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ತಮ್ಮ ಉತ್ತರಾಧಿಕಾರಿಯ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ನ್ಯಾಯಮೂರ್ತಿ ಲಲಿತ್ 74 ದಿನಗಳ ಅಧಿಕಾರಾವಧಿ ಹೊಂದಿದ್ದರೆ, ನ್ಯಾಯಮೂರ್ತಿ ಚಂದ್ರಚೂಡ್ ಎರಡು ವರ್ಷಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement