ಕೇದಾರನಾಥ ಬಳಿ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು

ಕೇದಾರನಾಥ : ಮಂಗಳವಾರ(ಅಕ್ಟೋಬರ್ 18), ಉತ್ತರಾಖಂಡದ ಕೇದಾರನಾಥದ ಲಿಂಚೋಲಿ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ಪ್ರಯಾಣಿಸುತ್ತಿದ್ದ 2 ಪೈಲಟ್‌ಗಳು ಮತ್ತು 5 ಪ್ರಯಾಣಿಕರು ಸೇರಿದಂತೆ ಏಳು ಜನರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಉತ್ತರಾಖಂಡ ಸರ್ಕಾರ ತಿಳಿಸಿದೆ.
ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿರುವ ಶಂಕೆಯೂ ವ್ಯಕ್ತವಾಗಿದ್ದು, ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯನ್ನು “ದುರದೃಷ್ಟಕರ” ಎಂದು ಕರೆದಿದ್ದಾರೆ ಮತ್ತು ಈ ದುರಂತ ಹೆಲಿಕಾಪ್ಟರ್ ಅಪಘಾತದ ಘಟನೆಯ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ನಾಗರಿಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಸಚಿವಾಲಯವು ಉತ್ತರಾಖಂಡ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. “ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಕೇದಾರನಾಥ ಪವಿತ್ರ ದೇಗುಲದಿಂದ 2-2.5 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಸಂಸ್ಥೆ ಆರ್ಯನ್ ಏವಿಯೇಷನ್‌ಗೆ ಸೇರಿದ ಬೆಲ್ 407 ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಕ್ರ್ಯಾಶ್ ಸೈಟ್‌ನಿಂದ ಬರುವ ದೃಶ್ಯಗಳು ಪರ್ವತಮಯ ಭೂಪ್ರದೇಶವನ್ನು ತೋರಿಸುತ್ತದೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement