‘ಪೇಸಿಎಂ’ ನಂತರ ಕರ್ನಾಟಕದಲ್ಲಿ ಈಗ SayCm ಅಭಿಯಾನ ಆರಂಭಿಸಿದ ಕಾಂಗ್ರೆಸ್‌…!

ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್  ಸರ್ಕಾರ ಅಭಿಯಾನ ಹಮ್ಮಿಕೊಂಡಿದ್ದ ಕಾಂಗ್ರೆಸ್, ಈಗ SayCm ಎಂಬ ಹೊಸ ಅಭಿಯಾನ ಹಮ್ಮಿಕೊಂಡಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ಕಾಂಗ್ರೆಸ್ ಈ‌ ಅಭಿಯಾನ ಹಮ್ಮಿಕೊಂಡಿದ್ದು, PayCM ಎಂಬುದು ಈಗ SayCM ಆಗಲಿ,
ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಆಗ್ರಹಿಸಿದೆ.
ಚುನಾವಣೆ ಪೂರ್ವ ಭರವಸೆಗಳನ್ನು ಮರೆತು ವಚನ ಭ್ರಷ್ಟ ಬಿಜೆಪಿ ಸರ್ಕಾರ, ರಾಜ್ಯದ ಜನತೆಗೆ ಉತ್ತರ ನೀಡಬೇಕು. ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತನಾಡಲಿಕ್ಕೂ 40% ಕಮಿಷನ್ ನೀಡಬೇಕೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ? ಎಂದು ಪ್ರಶ್ನಿಸಿದೆ.
ಕ್ಯೂ ಆರ್ ಕೋಡ್ ಮೂಲಕ ಸೇಸಿಎಂ (SayCM) ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದ್ದು,‌ ಟ್ವೀಟ್ ಮೂಲಕ ಪೋಸ್ಟರ್ ಅಭಿಯಾನ ನಡೆಸಿದೆ. ಚುನಾವಣೆಗೆ ಮುನ್ನ ಅನೇಕ ಭರವಸೆಗಳನ್ನು ಕೊಟ್ಟಿದ್ದೀರಿ. ಈಗ ವಚನ ಭ್ರಷ್ಟರಾಗಿದ್ದೀರಿ. ಈ ಬಗ್ಗೆ ರಾಜ್ಯದ ಜನರಿಗೆ ಉತ್ತರ ಕೊಡಬೇಕಿದೆ. ತಮ್ಮದೇ ಭರವಸೆ ಬಗ್ಗೆ ಹೇಳೋಕೆ ಕಮೀಷನ್ ಕೊಡಬೇಕೇ? ಎಂದು‌ ಟ್ವೀಟ್ ಮೂಲಕ ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

“PayCM” ಅಭಿಯಾನಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸಿತು ಎಂಬುದನ್ನು ಗಮನಿಸಿದರೆ, ಕಳೆದ ಮೂರು ವರ್ಷಗಳಲ್ಲಿನ ತಮ್ಮ ವೈಫಲ್ಯಗಳಿಗೆ ಉತ್ತರ ನೀಡುವಂತೆ ಬಿಜೆಪಿಯನ್ನು ಒತ್ತಾಯಿಸಲು “SayCM” ಅನ್ನು ಪ್ರಾರಂಭಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ. 2023ರ ವಿಧಾನಸಭಾ ಚುನಾವಣೆಯವರೆಗೂ ಆಡಳಿತಾರೂಢ ಸರ್ಕಾರವನ್ನು ಪ್ರಶ್ನಿಸುವುದನ್ನು ಮುಂದುವರಿಸಲು ಕಾಂಗ್ರೆಸ್ ಉದ್ದೇಶಿಸಿದೆ.

ಪ್ರತಿ ಬಾರಿ ಉತ್ತರದಾಯಿತ್ವ ಕೇಳಿದಾಗ ಅಥವಾ ಸಾರ್ವಜನಿಕ ಪರಿಶೀಲನೆಗೆ ಒಳಗಾದಾಗ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಹೇಗೆ ಧ್ರುವೀಕರಣ ಮತ್ತು ವಿಭಜಕ ತಂತ್ರಗಳನ್ನು ಬಳಸುತ್ತದೆ ಎಂಬುದಕ್ಕೆ ಸಿಬಿಐ ವರದಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿರುವ ಕಾಂಗ್ರೆಸ್ ಪರೇಶ್ ಮೇಸ್ತಾ ವಿಷಯವನ್ನು ಎತ್ತಿಕೊಂಡಿದೆ.
ಈ ಹಿಂದೆ ವರದಿಯಾಗಿರುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ‘ಪೇಸಿಎಂ’ ಅಭಿಯಾನದ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕರ್ನಾಟಕದ ಹಲವಾರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement