ಬೆಳಗಾವಿ: ಶಸ್ತ್ರಚಿಕಿತ್ಸೆ ಮೂಲಕ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ 5.75 ಕಿಲೋ ತೂಕದ ಗಂಟನ್ನು ಯಶಸ್ವಿಯಾಗಿ ಹೊರತೆಗೆದ ಕೆಎಲ್‌ಇ ವೈದ್ಯರು

posted in: ರಾಜ್ಯ | 0

ಬೆಳಗಾವಿ : ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ ತಜ್ಞೆ ಡಾ. ಗೀತಾಂಜಲಿ ತೋಟಗಿ ಅವರು ಸುಮಾರು 50 ವರ್ಷದ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ ಸುಮಾರು 30 ಸೆಂಟಿಮೀಟರ್ ಸುತ್ತಳತೆಯ 5.75 ಕಿಲೋಗ್ರಾಂ ತೂಕದ ಗಂಟನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ಪ್ರಸ್ತುತ ಮಹಿಳೆಯು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧದ ಮಾತನಾಡಿದ ಡಾ. ಗೀತಾಂಜಲಿ ತೋಟಗಿ, ಗರ್ಭಾಶಯ, ಅಂಡಾಶಯ ಹಾಗೂ ಅದರ ಆಂತರಿಕ ಪರಿಸರದಲ್ಲಾಗುವ ರಾಸಾಯನಿಕ ಬದಲಾವಣೆಗಳು, ಅನುವಂಶೀಯತೆ, ಹಾರ್ಮೋನುಗಳಲ್ಲಾಗುವ ಬದಲಾವಣೆ, ಆಹಾರ ಕ್ರಮದಲ್ಲಾಗುವ ಏರಿಳಿತಗಳು, ಆರೋಗ್ಯದ ಬಗ್ಗೆ ಅಲಕ್ಷ್ಯ ಇವೇ ಮೊದಲಾದ ಕಾರಣಗಳಿಂದ ಈ ತೆರನಾದ ಗಂಟುಗಳಾಗಿ ಮಹಿಳೆಯರು ಸಮಸ್ಯೆಗೆ ಗುರಿಯಾಗುತ್ತಾರೆ. ಕಾಲಕಾಲಕ್ಕೆ ವೈದ್ಯರ ತಪಾಸಣೆಗೊಳಪಟ್ಟು ಇಂತಹ ಸಮಸ್ಯೆಗಳು ಉಲ್ಭಣಗೊಳ್ಳುವದಕ್ಕಿಂತ ಮುಂಚೆಯೇ ತಕ್ಕ ಚಿಕಿತ್ಸೆ ಪಡೆದರೆ ಈ ಸಮಸ್ಯೆ ಅಷ್ಟೊಂದು ತೀವ್ರತೆಗೆ ಹೋಗುವುದಿಲ್ಲ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಶಸ್ತ್ರ ಚಿಕಿತ್ಸೆ ತಂಡದಲ್ಲಿ ಅರವಳಿಕೆ ವಿಭಾಗದ ಮುಖ್ಯಸ್ಥ ಡಾ. ಆರ್. ಜಿ.ನೆಲವಿಗಿ ಹಾಗೂ ಅರವಳಿಕೆ ತಜ್ಞ ಡಾ. ಸುರೇಶ ಎಸ್ .ಎನ್. ಇದ್ದರು. ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ ಮುಖ್ಯಸ್ಥೆ ಡಾ. ರಾಜೇಶ್ವರಿ ಕಡಕೋಳ ಮಾತನಾಡಿ, ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ವೈದ್ಯರು ಹಾಗೂ ದಾದಿಯರ ತಂಡಕ್ಕೆ ಅಭಿನಂದಿಸಿದರು. ಇಂತಹ ಕ್ಲಿಷ್ಟ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೆಆಸ್ಪತ್ರೆಯ ನಿರ್ದೇಶಕ ಡಾ. ಎಸ್. ಸಿ.ಧಾರವಾಡ ಅಭಿನಂದಿಸಿ ಮಾತನಾಡಿ, ಪ್ರತಿ 1000 ಮಹಿಳೆಯರಲ್ಲಿ 20 ರಿಂದ 30 ಮಹಿಳೆಯರಲ್ಲಿ ಇಂತಹ ಸಮಸ್ಯೆಗಳನ್ನು ಕಾಣಬಹುದಾಗಿದೆ. ಆದರೆ ಇಷ್ಟುದೊಡ್ಡ ಗಂಟು ಇರುವುದು ಬಲು ಅಪರೂಪವಾಗಿದೆ. ಆದರೆ ಸಕಾಲಕ್ಕೆ ವೈದ್ಯರನ್ನು ಕಂಡು ತಪಾಸಣೆಗೊಳಪಟ್ಟಲ್ಲಿ ಇಂತಹ ಸಮಸ್ಯೆಗಳಿಂದ ದೂರವಿರಬಹುದಾಗಿದೆ ಎಂದರು.
ಇಂತಹ ಕಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ ವೈದ್ಯರ ತಂಡವನ್ನು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿನಂದಿಸಿದ್ದಾರೆ. ಯುಎಸ್‌ಎಂಕೆಎಲ್‌ಇ ನಿರ್ದೇಶಕ ಡಾ. ಎಚ್.ಬಿ.ರಾಜಶೇಖರ ಅಭಿನಂದಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement