ಸುರತ್ಕಲ್ ಟೋಲ್‌‌ಗೇಟ್‌‌ ತೆರವಿಗೆ ಒತ್ತಾಯಿಸಿ ಮುತ್ತಿಗೆ : ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

posted in: ರಾಜ್ಯ | 0

ಮಂಗಳೂರು:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ವಶಕ್ಕೆ ಪಡೆದಿದ್ದಾರೆ.
ಟೋಲ್‌ ಗೇಟ್‌ ಮುತ್ತಿಗೆ ವೇಳೆ ಪ್ರತಿಭಟನಾಕಾರರು ಹಾಗೂ ಪೋಲಿಸರ ನಡುವೆ ನೂಕಾಟ ನಡೆದಿದೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರೊಬ್ಬರಿಗೆ ಕಣ್ಣಿಗೆ ಲಾಠಿ ತಾಗಿ ಗಾಯಗೊಂಡಿದ್ದು, ಅವರನ್ನು ಸುರತ್ಕಲ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಟೋಲ್ ಸಂಗ್ರಹ ಇಂದಿನಿಂದಲೇ ಸ್ಥಗಿತಗೊಳ್ಳದಿದ್ದರೆ ನಾಳೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ಐವನ್‌ ಡಿ ಸೋಜ, ವಿನಯಕುಮಾರ ಸೊರಕೆ, ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಶಕುಂತಳಾ ಶೆಟ್ಟಿ, ಮಿಥುನ್ ರೈ ಸೇರಿದಂತೆ ಹಲವಾರು ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರ-ಉಡುಪಿ ಮಧ್ಯೆ ಹೆಜಮಾಡಿ ಬಳಿ ಟೋಲ್‌ ಆರಂಭವಾಗುವ ವರೆಗೂ ಸುರತ್ಕಲ್‌ ಟೋಲ್‌ ಅನ್ನು ತಾತ್ಕಾಲಿಕವಾಗಿ ಆರಂಭಿಸಲಾಗಿತ್ತು. ಹೆಜಮಾಡಿ ಟೋಲ್‌ ಆರಂಭವಾಗಿ ಅನೇಕ ವರ್ಷಗಳೇ ಕಳೆದಿವೆ, ಆದರೂ ಸುರತ್ಕಲ್‌ ಟೋಲ್‌ನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್‌ಆರ್‌ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ದುಬೈ ಪ್ರವಾಸ ಮಾಡಲು ಡಿ. ಕೆ. ಶಿವಕುಮಾರಗೆ ಅನುಮತಿ ನೀಡಿದ ವಿಶೇಷ ನ್ಯಾಯಾಲಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement