ಆಂಧ್ರ ದೇವಸ್ಥಾನದಲ್ಲಿ ಪುರಾತನ ನಂದಿ ವಿಗ್ರಹ ಧ್ವಂಸ: ನಿಧಿಗಳ್ಳರ ಕೃತ್ಯದ ಶಂಕೆ

ಹೈದರಾಬಾದ್‌: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕನಪರ್ತಿ ಗ್ರಾಮದಲ್ಲಿ ಪುರಾತನವಾದ ಶಿವನ ದೇವಾಲಯದಲ್ಲಿ ನಂದಿ ವಿಗ್ರಹವನ್ನು ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ ಮತ್ತು ಸೋಮವಾರದ ಮಧ್ಯೆ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ ದೇವಸ್ಥಾನದ ಅರ್ಚಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು ದೇವಾಲಯದ ಆವರಣಕ್ಕೆ ನುಗ್ಗಿ ಕದಿಯುವ ಪ್ರಯತ್ನದಲ್ಲಿ ಅದನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ವಿಗ್ರಹವನ್ನು ವಿಧಿವಿಜ್ಞಾನಕ್ಕೆ ಕಳುಹಿಸಲಾಗಿದೆ. ಅಪರಿಚಿತರಿಂದ ವಿಗ್ರಹಕ್ಕೆ ಹಾನಿ ಮಾಡಲಾಗಿದ್ದು, ಅವರು ಕೆಲವು ಆಸ್ತಿಗಳನ್ನು ಕದಿಯಲು ದೇವಾಲಯಕ್ಕೆ ಪ್ರವೇಶಿಸಿದ ಕಳ್ಳರು ಎಂದು ಶಂಕಿಸಲಾಗಿದೆ.

ನಾವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ ಮತ್ತು ತನಿಖೆಗಾಗಿ ಸರ್ಕಲ್ ಇನ್ಸ್‌ಪೆಕ್ಟರ್ (ಸಿಐ) ನೇತೃತ್ವದ ವಿಶೇಷ ತಂಡವನ್ನು ರಚಿಸಲಾಗಿದೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾರನ್ನೂ ಬಂಧಿಸಿಲ್ಲ.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ತೆಲುಗು ದೇಶಂ ಕಳ್ಳತನ, ವಿಗ್ರಹ ಧ್ವಂಸ ಮತ್ತು ದೇವಾಲಯಗಳಲ್ಲಿನ ವಿಗ್ರಹಗಳನ್ನು ಅಪವಿತ್ರಗೊಳಿಸುವಂತಹ ಅನೇಕ ಪ್ರಕರಣಗಳು ನಡೆದಿವೆ ಮತ್ತು ಇವುಗಳನ್ನು ಉದ್ದೇಶಿತ ದಾಳಿ ಎಂದು ಆರೋಪಿಸಿವೆ. ಹೈದರಾಬಾದ್‌ನಲ್ಲಿ ದುರ್ಗಾ ಮಾತೆಯ ವಿಗ್ರಹವನ್ನು ಧ್ವಂಸಗೊಳಿಸಿದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement