2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ, ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಆರ್ಥಿಕ ತಜ್ಞರಾದ ಮೋಹನ್‍ದಾಸ್ ಪೈ ಮತ್ತು ದಿಶಾ ಹೊಳ್ಳ ಅವರು ತಯಾರಿಸಿದ $1 Trillion GDP Vision ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವ ಕೆಲಸವನ್ನು ಈ ತಂಡ ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುವುದು ಎಂದು ಹೇಳಿದರು
ದೇಶದ ಐದು ಪ್ರಮುಖ ರಾಜ್ಯಗಳಲ್ಲಿ ಮೂರನೇ ಅತಿಹೆಚ್ಚು ಜಿಡಿಪಿ ಹೊಂದಿರುವ ಕರ್ನಾಟಕ ತಲಾ ಆದಾಯದಲ್ಲೂ ಮುಂಚೂಣಿಯಲ್ಲಿದೆ ಎಂದರು.

ಸೇವಾ ವಲಯದಲ್ಲಿ ಶೇ.66ರಷ್ಟು ಪಾಲು ಹೊಂದಿದ್ದು, ಮುಂಬರುವ ಆರ್ಥಿಕ ವರ್ಷದೊಳಗೆ ಒಂದು ಟ್ರಿಲಿಯನ್ ಡಾಲರ್‌ಗಳ ಗುರಿ ಹೊಂದಬೇಕು. ಅಧಿಕಾರಿಗಳು ಇದಕ್ಕೆ ತಕ್ಷಣವೇ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದರು.
ಕೋವಿಡ್‌ ಸಾಂಕ್ರಾಮಿಕ ರೋಗದ ಹೊರತಾಗಿಯೂ 2022ರ ರಾಜ್ಯದ ಒಟ್ಟು ಆಂತರಿಕ ಉತ್ಪನ್ನವು 273 ಬಿಲಿಯನ್ ಅಮೆರಿಕನ್ ಡಾಲರ್ ಆಗಿದೆ. 2026ರ ವೇಳೆಗೆ ಜಿಡಿಪಿ 500 ಬಿಲಿಯನ್‍ಗೆ ಹಾಗೂ 2030ರ ವೇಳೆಗೆ ಒಂದು ಟ್ರಿಲಿಯನ್ ತಲುಪಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ದೇಶದ ಒಟ್ಟು ಉದ್ಯೋಗಗಳಲ್ಲಿ ಕರ್ನಾಟಕದ ಪಾಲು ಶೇ.11ರಷ್ಟು. ಇದರಲ್ಲಿ 4.4 ಲಕ್ಷ ಜನರು 22ರಿಂದ 25 ವರ್ಷದ ವಯೋಮಾನದವರು. ಈ ಕೆಟಗರಿಯಲ್ಲಿ ಕರ್ನಾಟಕವು ದೇಶದ ದೇಶದ ಶೇ.13ರಷ್ಟು ಪಾಲನ್ನು ಹೊಂದಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.10ರಷ್ಟು ಜನರು 60 ವರ್ಷದವರಿಗಿಂತ ಹೆಚ್ಚಿನವರಾಗಿದ್ದಾರೆ. ಇದು 2031ಕ್ಕೆ ಶೇ.15ರಷ್ಟು ಹೆಚ್ಚಳವಾಗುತ್ತದೆ ಎಂದು ಅಂದಾಜಿಸಲಾಗಿದೆ ಎಂದರು.
ಭಾರತವು ಶೇ.10 ಟ್ರಿಲಿಯನ್ ಡಾಲರ್‌ಗಳ ಆರ್ಥಿಕ ಶಕ್ತಿ ಗುರಿ ಇಟ್ಟುಕೊಂಡಿದ್ದು, ಅವಿಭಾಜ್ಯ ಅಂಗವಾಗಲು ನಮಗೆ ಹೆಚ್ಚಿನ ಅವಕಾಶವಿದೆ. 2026ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್‌ ಆರ್ಥಿಕತೆಯಾಗುವ ಗುರಿ ಇಟ್ಟುಕೊಂಡಿದೆ ಎಂದು ಹೇಳಿದರು.
ಅಭಿವೃದ್ಧಿ ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯ ಹೆಚ್ಚಿಸುವುದು, ಕೈಗಾರಿಕೆ, ಕೃಷಿ ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ ಮತ್ತು ಬೆಳವಣಿಗೆ ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯ ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆ ಕಾಣಬಹುದು ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement