ಕನಕಪುರದಲ್ಲಿ ರೇಷನ್ ಕಾರ್ಡ್​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ; ಮತ್ತೆ ವಿವಾದ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ವಿವಾದ ಶುರುವಾಗಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಪಡಿತರಿಗೆ ನೀಡುವ ರೇಷನ್ ಕಾರ್ಡ್​​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ ಮಾಡಿ ಹಂಚಲಾಗಿದೆ. ಮುದ್ರಣವಾಗಿರುವ ರೇಷನ್ ಕಾರ್ಡ್​ಗಳು ಗಮನಕ್ಕೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಆಕ್ರೋಶವ್ಯಕ್ತಪಡಿಸಿವೆ.
ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಅಷ್ಟೇ ಅಲ್ಲದೆ, ಸರ್ಕಾರದಿಂದ ನೀಡಲಾಗುವ ಪಡಿತರ ಚೀಟಿ ಹಿಂಭಾಗ ಫೋಟೋ ಮುದ್ರಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿವೆ. ಶ್ರೀರಾಮಸೇನೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರಿಗೆ ದೂರು ನೀಡಿದೆ ಎಂದು ವರದಿಗಿಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಕನಕಪುರದ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದು ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement