ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ಗುಡ್​ ನ್ಯೂಸ್ : 50 ಲಕ್ಷ ರೂ. ವರೆಗೆ ಅಪಘಾತ ವಿಮೆ ಯೋಜನೆ ಜಾರಿ

ಬೆಂಗಳೂರು: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರ ಮೊದಲ ಬಾರಿಗೆ ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 50 ಲಕ್ಷ ರೂ.ಗಳ ವರೆಗೆ ಅಪಘಾತ ವಿಮೆ ಯೋಜನೆ(Insurance Scheme)ಯನ್ನು ನಿಗಮ ಜಾರಿ ಮಾಡಿದೆ.
ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಜತೆ ಕೆಎಸ್‌ಆರ್‌ಟಿಸಿ ಬುಧವಾರ ಒಡಂಬಡಿಕೆ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಎಸ್‌ಬಿಐ ಉಪಪ್ರಧಾನ ವ್ಯವಸ್ಥಾಪಕ ಪಂಕಜ್ ತಪ್ಲಿಯಾಲ್ ಒಪ್ಪಂದಕ್ಕೆ ಸಹಿ ಹಾಕಿದರು.
ಅಪಘಾತದಲ್ಲಿ ಸಿಬ್ಬಂದಿ ಮೃತಪಟ್ಟರೆ ಅವಲಂಬಿತರಿಗೆ ಇಲ್ಲಿವರೆಗೆ ಪರಿಹಾರ ಸಿಗುತ್ತಿರಲಿಲ್ಲ. ಈ ಹೊಸ ಯೋಜನೆಯಿಂದ ಎಸ್‌ಬಿಐ ಬ್ಯಾಂಕ್‌ನಲ್ಲಿ ವೇತನ ಖಾತೆ ಹೊಂದಿರುವ ನೌಕರರಿಗೆ ‘ಪ್ರೀಮಿಯಂ ರಹಿತ’ ವೈಯಕ್ತಿಕ ಅಪಘಾತ ವಿಮೆ ಲಭ್ಯವಾಗಲಿದೆ. ನಿಗಮದ ಶೇ55ಕ್ಕೂ ಹೆಚ್ಚು ಸಿಬ್ಬಂದಿ ಎಸ್‌ಬಿಐನಲ್ಲಿ ವೇತನ ಖಾತೆ ಹೊಂದಿದ್ದಾರೆ ಎಂದು ನಿಗಮ ಹೇಳಿದೆ.

ನಿಗಮದ ವೈಯಕ್ತಿಕ ವಿಮಾ ಯೋಜನೆ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟರೆ ಅವರ ಅವಲಂಬಿತರಿಗೆ ₹50 ಲಕ್ಷ ಪರಿಹಾರ ದೊರೆಯಲಿದೆ. ಶಾಶ್ವತ ಅಂಗವಿಕಲರಾದರೆ ₹20 ಲಕ್ಷ ಹಾಗೂ ಭಾಗಶಃ ಅಂಗವಿಕಲರಾದರೆ ₹10 ಲಕ್ಷ ವಿಮಾ ಪರಿಹಾರ ದೊರೆಯಲಿದೆ.
ಅಲ್ಲದೆ, ಗಾಯಗೊಂಡ ಸಿಬ್ಬಂದಿ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗೆ ಗರಿಷ್ಠ ₹10 ಲಕ್ಷ, ಔಷಧಗಳ ಆಮದಿಗೆ ಗರಿಷ್ಠ ₹5 ಲಕ್ಷ, ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿ ₹2 ಲಕ್ಷ (₹50 ಲಕ್ಷ ಮತ್ತು ₹2 ಲಕ್ಷ), ವಿಮಾನ ಆಂಬುಲೆನ್ಸ್‌ ಸೇವೆಗೆ ₹10 ಲಕ್ಷ ಪರಿಹಾರ ದೊರಕಲಿದೆ. ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಅವರ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಠ ₹5 ಲಕ್ಷ ಹಾಗೂ ಹೆಣ್ಣುಮಗಳ ವಿವಾಹಕ್ಕೆ ಗರಿಷ್ಠ ₹5 ಲಕ್ಷದ ತನಕ ಆರ್ಥಿಕ ಸಹಾಯವನ್ನೂ ಈ ವಿಮೆ ಒಳಗೊಂಡಿದೆ ಎಂದು ನಿಗಮ ತಿಳಿಸಿದೆ. ಕರ್ತವ್ಯದಲ್ಲಿ ಇಲ್ಲದ ಅವಧಿಯಲ್ಲಿ ಅಪಘಾತ ಸಂಭವಿಸಿದರೂ ಪಾಲಿಸಿದಾರರಿಗೆ ವಿಮಾ ಸೌಲಭ್ಯ ದೊರೆಯಲಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement