ಬಲಿಪಾಡ್ಯಮಿ ದಿನ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಬಲಿಪಾಡ್ಯಮಿ ದಿನ ಅಕ್ಟೋಬರ್ 26ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
24 ವರ್ಷಗಳ ನಂತರ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಲಿಕೊಳ್ಳಲಿರುವ ಅವರು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7897 ಮತಗಳನ್ನು ಪಡೆದು ಜಯಗಳಿಸಿದ್ದಾರೆ, ಅವರ ಪ್ರತಿಸ್ಪರ್ಧಿ ಶಶಿ ತರೂರ್ 1072 ಮತಗಳನ್ನು ಪಡೆದರೆ, ಸುಮಾರು 416 ಮತಗಳು ತಿರಸ್ಕೃತವಾಗಿವೆ.

ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ನೂತನ ಅಧ್ಯಕ್ಷರ ಆಯ್ಕೆಗೆ ಮತ ಎಣಿಕೆ ಆರಂಭವಾಯಿತು. 1998 ರಿಂದ, ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ, ಆದರೆ ರಾಹುಲ್ ಗಾಂಧಿ ಅವರು ಅಲ್ಪಾವಧಿಗೆ ಆ ಸ್ಥಾನದಲ್ಲಿದ್ದರು. 2019ರ ಲೋಕಸಭೆ ಚುನಾವಣೆಯ ಸೋಲಿನ ನಂತರ ರಾಜೀನಾಮೆ ನೀಡಿದರು. ಹೊಸ ಅಧ್ಯಕ್ಷರ ಮುಂದಿರುವ ಮೊದಲ ಸವಾಲು ರಾಜಸ್ಥಾನ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಜಗಳವನ್ನು ಪರಿಹರಿಸುವುದಾಗಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಶುಭಾಶಯಗಳು. ಮುಂದೆ ಅವರು ಫಲಪ್ರದವಾದ ಅಧಿಕಾರಾವಧಿಯನ್ನು ಹೊಂದಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement