ನವಂಬರ್14 ರಿಂದ‌ ʼಸಹಕಾರ ಸಪ್ತಾಹʼ, ಕಲಬುರಗಿಯಲ್ಲಿ ಉದ್ಘಾಟನೆ : ಸಚಿವ ಸೋಮಶೇಖರ ಮಾಹಿತಿ

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಕೂಡ ನವೆಂಬರ್ 14 ರಿಂದ 20ರ ವರೆಗೆ ಸಹಕಾರ ಸಪ್ತಾಹ ನಡೆಯಲಿದೆ. ನವೆಂಬರ್ 14ರಂದು ಹಿರಿಯ ಸಹಕಾರಿಗಳಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ ಹೇಳಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯ ಸಭಾಂಗಣ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಹಕಾರ ಸಪ್ತಾಹದ ಪೂರ್ವಭಾವಿ ಸಿದ್ಧತಾ ಸಭೆ” ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ 14ರಂದು ಕಲಬುರಗಿಯಲ್ಲಿ ಸಹಕಾರ ಸಪ್ತಾಹದ ಉದ್ಘಾಟನೆ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ನವೆಂಬರ್ 20ರಂದು ಮೈಸೂರಿನಲ್ಲಿ ಸಮಾರೋಪ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಬಾರಿ ಸಹಕಾರ ರತ್ನ ಪ್ರಶಸ್ತಿಯನ್ನು ಆಯಾ ಜಿಲ್ಲೆಗಳಲ್ಲಿ ಪ್ರದಾನ ಮಾಡಲಾಗುತ್ತದೆ. ದೂರದ ಸ್ಥಳಗಳಿಂದ ಬರಲು ತೊಂದರೆ ಆಗುವುದರಿಂದ ಆಯಾ ಭಾಗದ ಸಹಕಾರಿಗಳ ಮಧ್ಯೆ ಗೌರವಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಹಾಲಿನ ದರ ಹೆಚ್ಚಳ ಸಿಎಂ ತೀರ್ಮಾನಕ್ಕೆ
ಹಾಲಿನ ದರ ಹೆಚ್ಚಳದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ದರ ಹೆಚ್ಚಳದ ಲಾಭಾಂಶದ ಹಣವನ್ನು ರೈತರಿಗೆ ನೀಡಬೇಕೆಂಬ ಒಲವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ. ಆದರೆ ದರ ಹೆಚ್ಚಳ ಮಾಡದಂತೆ ಗ್ರಾಹಕರ ವಲಯದಿಂದ ಒತ್ತಡವಿದೆ. ದರ ಹೆಚ್ಚಳದ ವಿಷಯ ಮುಖ್ಯಮಂತ್ರಿಗಳ ಗಮನದಲ್ಲಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ದರ ಹೆಚ್ಚಳದ ಬಗ್ಗೆ 15 ಹಾಲು ಒಕ್ಕೂಟಗಳಿಂದ ಮಾಹಿತಿ ನೀಡಲಾಗಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಂದಿನಿ ಕ್ಷೀರಸಮೃದ್ಧಿ ಬ್ಯಾಂಕ್
ನಂದಿನಿ ಕ್ಷೀರಸಮೃದ್ಧಿ ಬ್ಯಾಂಕ್ ಸ್ಥಾಪನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ಕೇಂದ್ರ ಸಚಿವರಾದ ನಿರ್ಮಲಾ ಸೀತರಾಮನ್ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ. ಆರ್‌ಬಿಐಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿದೆ. ಆರ್ ಬಿಐ ಅನುಮತಿಗೆ ಕೆಲವು ತಿದ್ದುಪಡಿ ಅವಶ್ಯವಿದ್ದು ತಿದ್ದುಪಡಿ ಬಳಿಕ ಜಾರಿಯಾಗಲಿದೆ. ಯಶಸ್ವಿನಿ ಜಾರಿಗೆ ಎಲ್ಲಾ ಕಾರ್ಯ ಮುಕ್ತಾಯವಾಗಿದ್ದು ನವೆಂಬರ್ 1ಕ್ಕೆ ಮುಖ್ಯಮಂತ್ರಿಗಳು ಜಾರಿ ಮಾಡಲಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಶಾಸಕರಾದ ಶಿವಾನಂದ ಪಾಟೀಲ, ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಶಂಕರ್, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಕೆ. ರಾಜೇಂದ್ರ ಮೊದಲಾದವರಿದ್ದರು.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement