ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ; ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್‌ 22ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಅಕ್ಟೋಬರ್‌ 20ರಿಂದ 22ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆ ಇರಲಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆ ಸುರಿಯಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement