ಸ್ಟಾಫ್ ಸೆಲೆಕ್ಷನ್ ಕಮಿಷನ್: 990 ಸೈಟಿಂಸ್ಟ್​ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ 990 ಸೈಟಿಂಸ್ಟ್​ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಹವಾಮಾನ ಇಲಾಖೆಯಲ್ಲಿ (IMD) ಈ ನೇಮಕಾತಿ ನಡೆಯಲಿದ್ದು, ಇವುಗಳು ಗ್ರೂಪ್​​ ಬಿ ನಾನ್​ ಗೆಜೆಟ್​ ಹುದ್ದೆಗಳಾಗಿವೆ. ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 18.
ಹುದ್ದೆಯ ಹೆಸರು-ವೈಜ್ಞಾನಿಕ ಸಹಾಯಕ
ಹುದ್ದೆಗಳ ಸಂಖ್ಯೆ -990
ಉದ್ಯೋಗ ವ್ಯಾಪ್ತಿ-ಅಖಿಲ ಭಾರತ
ವೇತನ -ಎಸ್‌ಎಸ್‌ಸಿ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ವಿಜ್ಞಾನ/ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 05 ವರ್ಷಗಳು
ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಮಹಿಳೆಯರು, ಪ.ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ.
ಪಾವತಿ ವಿಧಾನ: ಆನ್‌ಲೈನ್​ ಅಥವಾ ಚಲನ್
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ , ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಮಹತ್ವದ ದಿನಾಂಕ:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಸೆಪ್ಟೆಂಬರ್​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಅಕ್ಟೋಬರ್ 2022
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್‌ಗಾಗಿ ಇಲ್ಲಿ ಕ್ಲಿಕ್ ಮಾಡಬಹುದು-notice_IMD_30092022
ಅಧಿಕೃತ ವೆಬ್‌ಸೈಟ್: http://kshrc.karnataka.gov.in

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement