ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ : ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ  ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಲು  ಒಪ್ಪಿಗೆ ನೀಡಿದೆ ಹಾಗೂ  ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಎಸ್​​ಸಿಯಲ್ಲಿ 103 ಜಾತಿಗಳಿವೆ, ಎಸ್​ಟಿಯಲ್ಲಿ 56 ಜಾತಿಗಳಿವೆ. ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈಗ ಕಾನೂನು ಪರಿಮಿತಿಯಲ್ಲಿ ತೀರ್ಮಾನಿಸಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಇನ್ನೆರಡು ದಿನಗಳಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು
ಮೀಸಲಾತಿಗೆ ಅರ್ಹವಾಗಿರುವ ಜಾತಿಗಳ ಸಂಖ್ಯೆ ಏರಿಕೆಯಾಗಿದೆ. ಪರಿಶಿಷ್ಟ ಜಾತಿಯಲ್ಲಿ 103 ಜಾತಿಗಳಿವೆ. ಪರಿಶಿಷ್ಟ ಪಂಗಡದಲ್ಲಿ 57 ಜಾತಿಗಳು ಆಗಿವೆ. ಮೀಸಲಾತಿ ಹೆಚ್ಚಳ ಇಡಬ್ಲ್ಯುಎಸ್‌ (Economically weaker Section) ಮಾದರಿಯಲ್ಲಿ ಇರಲಿದೆ. ಆದರೆ ಅದಕ್ಕೆ ಸಂವಿಧಾನಾತ್ಮಕ ಬಲ ಇರಲಿದೆ. ಸುಗ್ರೀವಾಜ್ಞೆ ತರುವಾಗ ಸಂವಿಧಾನದ ಪ್ರಕಾರವೇ ಅದನ್ನು ತರುತ್ತೇವೆ. ಕೋರ್ಟ್ ನಲ್ಲೂ ನಮಗೆ ರಕ್ಷಣೆ ಸಿಗುವ ವಿಶ್ವಾಸವಿದೆ. ಸಮುದಾಯಗಳ ಹೆಚ್ಚಳವೇ ನಮ್ಮ ಪ್ರಯತ್ನಕ್ಕೆ ಪೂರಕ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ ಹೆಚ್ಚುವರಿ ಮೀಸಲಾತಿಯನ್ನು ಹೇಗೆ ಹಾಗೂ ಎಲ್ಲಿಂದ ಕೊಡಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement