ಕನ್ನಡ ರಾಜ್ಯೋತ್ಸವದಂದು ಪುನೀತ ರಾಜಕುಮಾರ​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಪವರ್‌ಸ್ಟಾರ್‌ ದಿವಂಗತ ಪುನೀತ್ ರಾಜ್​ಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕೊಡಲು ತೀರ್ಮಾನಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಗುರುವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವಾರು ಸಾಹಿತಿಗಳು, ನಟರು, ಕಲಾವಿದರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ ಎಂದರು.

ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ. ನವೆಂಬರ್ 1ರ ನಂತರ ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1 ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. 2009ರ ನಂತರ ಯಾರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement