ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಲಾಗಿದೆ.
ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಕೊಲೆ ಮಾಡಲಾಗಿದ್ದು, ನಿನ್ನೆಯ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಯಾದ ವುದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಈತ ಬೆಳಗಾವಿಯ ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ನಿನ್ನೆಯಿಂದ ಕಾಣೆಯಾಗಿರುವ ಬಗ್ಗೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಜ್ವಲನನ್ನು ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಅರೆಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಘಟನೆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. ಮಾರಿಹಾಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement