ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು

ಉಡುಪಿ: ದೈವಾರಾಧಾನೆ, ಭೂತದ ಕೋಲ  ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ ಹೇಳಿಕೆಗೆ ಅವರ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆ ವತಿಯಿಂದ ಈ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ಚೇತನ್​ ಹೇಳಿದ್ದರು.

ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚೇತನ್ ಅವರು, ‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿರುವುದು ನಿಜವಲ್ಲ. ಅದು ಹಿಂದೂ ಸಂಸ್ಕೃತಿಯೇ ಅಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದ್ದಿದ್ದು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ಚೇತನ್​ ಪೋಸ್ಟ್ ಮಾಡಿದ್ದರು.
ಈ ಹೇಳಿಕೆ ಬಗ್ಗೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ಚೇತನ್ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು. ಈಗ ಹಿಂದೂ ಜಾಗರಣಾ ವೇದಿಕೆಯವರು ಚೇತನ್ ವಿರುದ್ಧ ಕಾರ್ಕಳದಲ್ಲಿ ದೂರು ದಾಖಲು ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement