ಸಿಎಂ ಬೊಮ್ಮಾಯಿ ಭೇಟಿಯಾಗಿ ಮನವಿ ಸಲ್ಲಿಸಿದ ಪರೇಶ್ ಮೇಸ್ತ ತಂದೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಸ್ತಾ (Paresh Mesta) ಸಾವಿನ ಪ್ರಕರಣವನ್ನು ಪುನಃ ಸಿಬಿಐ (CBI) ಮೂಲಕ ತನಿಖೆ ಮಾಡಿಸುವಂತೆ ಪರೇಶ್ ಮೇಸ್ತಾ ತಂದೆ ಕಮಾಲಾಕರ ಮೇಸ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾದ ಕಮಲಾಕರ್ ಮೇಸ್ತಾ ಅವರು, ನನ್ನ ಮಗನ ಸಾವು ಅಸಹಜ ಸಾವಾಗಿದೆ. ಸಿಬಿಐಗೆ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್‌ (B Report) ಸಲ್ಲಿಸಿದೆ. ಇದರಿಂದ ನಾನು ನನ್ನ ಮಗನ ಸಾವಿನ ನ್ಯಾಯದಿಂದ ವಂಚಿತನಾಗಿದ್ದೇನೆ. ನನ್ನ ಮಗ ಪರೇಶ್ ಪ್ರಕರಣವನ್ನು ಸಿಬಿಐಗೆ ನೀಡುವಾಗ ಆತ ಮೃತಪಟ್ಟು 4 ತಿಂಗಳು ಮೀರಿತ್ತು. ಬಹುತೇಕ ಸಾಕ್ಷ್ಯಾಧಾರಗಳನ್ನು ನಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಆಳವಾಗಿ ತನಿಖೆ ಮಾಡಬೇಕಾದ ಅವಶ್ಯಕತೆ ಇದೆ. ಹೀಗಾಗಿ ಪ್ರಕರಣವನ್ನು ಸಿಬಿಐ ಮರು ತನಿಖೆಗೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕಮಲಾಕರ ಅವರ ಅಹವಾಲು ಆಲಿಸಿದ ಬೊಮ್ಮಾಯಿ, ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
2017ರ ಡಿಸೆಂಬರ್ 6ರಂದು ಹೊನ್ನಾವರದ ಪರಮೇಶ್ ಮೇಸ್ತಾ ನಾಪತ್ತೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರಕಟಿಸಿದರು. ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಗೂ ಇದು ಆಕಸ್ಮಿಕ ಸಾವು ಎಂದು ಉಲ್ಲೇಖಿಸಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement