ಅಯೋಧ್ಯಾ ರಾಮಮಂದಿರ ಸ್ಫೋಟಕ್ಕೆ ಪಿಎಫ್‌ಐ ಸಂಚು: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ…!

ರಾಯಗಢ(ಮಹಾರಾಷ್ಟ್ರ): ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸಲು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಚು ಮಾಡಿದ್ದ ಆಘಾತಕಾರಿ ವಿಷಯ ಬಂಧಿತನ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ ಪಿಎಫ್‌ಐ ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂಬ ಸ್ಫೋಟಕ ವಿಷಯವನ್ನು ಬಂಧಿತ ಪಿಎಫ್‌ಐ ಮುಖಂಡರು ಬಾಯ್ಬಿಟ್ಟಿದ್ದಾರೆ. ಇತ್ತೀಚೆಗೆ ದೇಶವ್ಯಾಪಿ ಪಿಎಫ್‌ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ ೩೫ ಪಿಎಫ್‌ಐ ಮುಕಂಡರು ಹಾಗೂ ಪದಾಧಿಕಾರಿಗಳನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿದ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚನ್ನು ಬಾಯ್ಬಿಟ್ಟಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪಿಎಫ್‌ಐ ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ತಿಳಿದುಬಂದಿದ್ದು, ಈ ವಾಟ್ಸಾಪ್ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ರಚಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ವಾಟ್ಸಾಪ್ ಗ್ರೂಪ್‌ನಲ್ಲಿ ಅಫ್ಘಾನಿಸ್ತಾನ ಮತ್ತು ಅರಬ್ ದೇಶಗಳ ೧೭೫ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲ ಸದಸ್ಯರು ವಿದೇಶದಲ್ಲಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

ನಾಲ್ವರು ಬಂಧನ:
ಈ ನಡುವೆ ಐಸಿಸ್ ಸೇರಿ ಜಾಗತಿಕ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಬಂಧ ಹೊಂದಿ ಹಲವೆಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದ ನಾಲ್ವರು ಮುಖಂಡರನ್ನು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸಿದ್ದಾರೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಗುರುವಾರ ಮುಂಜಾನೆ
ಜಿಲ್ಲೆಯ ಪನ್ವೇಲ್‌ನಲ್ಲಿ ಹಠಾತ್ ಕಾರ್ಯಾಚರಣೆ ಕೈಗೊಂಡು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.ಬಂಧಿತರಲ್ಲಿ ಸ್ಥಳೀಯ ಘಟಕದ ಕಾರ್ಯದರ್ಶಿ ಮತ್ತು ಸಂಘಟನೆಯ ರಾಜ್ಯ ವಿಸ್ತರಣಾ ಸಮಿತಿಯ ಇತರ ಇಬ್ಬರು ಕಾರ್ಯಕರ್ತರು ಸೇರಿದ್ದಾರೆ.
ಪಿಎಫ್‌ಐಗೆ ಸಂಬಂಧಿಸಿವೆ ಎನ್ನಲಾದ ಫುಲ್ವಾರಿ ಶರೀಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರ ನೆರವಿನೊಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಪ್ರತ್ಯೇಕ ತಂಡಗಳು ಪಾಟ್ನಾದ ಎರಡು ವಿಭಿನ್ನ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಐಸಿಸ್‌ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ “ಸಂಪರ್ಕ” ಹೊಂದಿದ ಆರೋಪದ ಮೇಲೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಪಿಎಫ್ಐ ಮತ್ತು ಅದರ ಎಂಟು ಸಹವರ್ತಿ ಸಂಘಟನೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿತ್ತು. ಕಳೆದ ತಿಂಗಳು ಅನೇಕ ರಾಜ್ಯಗಳಾದ್ಯಂತ ನಡೆದ ದಾಳಿಗಳಲ್ಲಿ ಪಿಎಫ್‌ಐನೊಂದಿಗೆ ಸಂಬಂಧ ಹೊಂದಿದ್ದ ೨೫೦ ಕ್ಕೂ ಹೆಚ್ಚು ಮಂದಿಯನ್ನು ದೇಶಾದ್ಯಂತ ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement