ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ: ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿನಿತ್ಯ ರಾತ್ರಿ 8 ಗಂಟೆಯಿಂದ 10ರ ವರೆಗೆ (2 ಗಂಟೆ) ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ಅಕ್ಟೋಬರ್‌ 24 ರಿಂದ 26ರ ವರೆಗೆ ದೀಪಾವಳಿ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದ ವೇಳೆ ಸುಪ್ರೀಂಕೋರ್ಟ್‌ ನೀಡಿದ ನಿರ್ದೇಶನ ಪಾಲಿಸುವಂತೆ ಮಂಡಳಿಯು ಸೂಚಿಸಿದೆ. ಈ ವಿಚಾರವಾಗಿ ಆಯಾ ಜಿಲ್ಲಾಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರು, ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಿಗೆ ಸುತ್ತೋಲೆ ಹೊರಡಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಹಸಿರು ಪಟಾಕಿಗೆ ಮಾತ್ರ ಅವಕಾಶ
ನಿತ್ಯ ರಾತ್ರಿ 8ರಿಂದ ರಾತ್ರಿ 10ರ ಒಳಗಾಗಿ ಪಟಾಕಿ ಸಿಡಿಸಬೇಕು. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಪಟಾಕಿ ಸಿಡಿಸುವುದು ಅಥವಾ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ, ಪಟಾಕಿ ಸಿಡಿಸುವವರು ಘನತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂಬ ನಿಯಮ ಕೂಡ ಜಾರಿಯಲ್ಲಿದ್ದು, ತಪ್ಪಿದಲ್ಲಿ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಮಾಲಿನ್ಯವನ್ನು ಅಳೆಯಲು ಬೆಂಗಳೂರು ನಗರ ಮತ್ತು ಜಿಲ್ಲೆಗಳಾದ್ಯಂತ ಸಾಧನಗಳನ್ನು ಅಳವಡಿಸಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement