
ಮಡಿಕೇರಿ: ‘ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ ಅವರು ಡಿವೈಎಸ್‌ಪಿ ಗಜೇಂದ್ರ ಪ್ರಸಾದ ಅವರಿಗೆ ದೂರು ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿಯೂ ಚೇತನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೇತನ್ ಅವರು ದೈವಗಳ ಆರಾಧನಾ ಹಿಂದೂಗಳ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿದ್ದರು, ಇದಕ್ಕೆ ವ್ಯಾಪಕವಾಗಿ ಆಕ್ಷೇಪಗಳು ವ್ಯಕ್ತವಾಗಿವೆ. ದೈವಾರಾಧಕರು ಈ ಬಗ್ಗೆ ಪಂಜರ್ಲಿ ದೈವಕ್ಕೆ ದೂರು ಸಲ್ಲಿಸುವುದಾಗಿ ಹೇಳಿದ್ದಾರೆ



ನಿಮ್ಮ ಕಾಮೆಂಟ್ ಬರೆಯಿರಿ