ಸಚಿವ ಸಂಪುಟ ವಿಸ್ತರಣೆಯೋ ? ಪುನರ್ ರಚನೆಯೋ ? ಕಾದು ನೋಡಿ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಚಿವ ಸಂಪುಟದ ಕುರಿತು ಚರ್ಚಿಸಲು ಬಿಜೆಪಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲು ಶೀಘ್ರದಲ್ಲೇ ನವದೆಹಲಿಗೆ ತೆರಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. ಆದರೆ ಇದು ಸಚಿವ ಸಂಪುಟ ವಿಸ್ತರಣೆಯೇ ಅಥವಾ ಪುನರ್ರಚನೆಯೇ ಎಂಬುದು ಸಸ್ಪೆನ್ಸ್ ಆಗಿ ಉಳಿಸಿಕೊಂಡಿದೆ.
ಸಂಪುಟಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. ಶೀಘ್ರದಲ್ಲೇ ನಾನು ದೆಹಲಿಗೆ ಹೋಗುತ್ತೇನೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಲವು ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಯಕರು (ಕೆ ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮುಂತಾದವರು) ಪಕ್ಷದ ನಾಯಕರನ್ನು ಭೇಟಿಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘‘ಊಹೆ ಬಗ್ಗೆ ನನಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಎಲ್ಲಾ ಆಕಾಂಕ್ಷಿಗಳು ಪ್ರಯತ್ನಗಳನ್ನು ಮಾಡುತ್ತಾರೆ, ಆದರೆ ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾದು ನೋಡಿ’ ಎಂದಷ್ಟೇ ಹೇಳಿದರು. ಸಚಿವ ಸಂಪುಟದ ಕಸರತ್ತು ಕುರಿತು ಪಕ್ಷದ ನಾಯಕತ್ವದೊಂದಿಗೆ ಚರ್ಚಿಸಲು ಈ ವಾರ ನವದೆಹಲಿಗೆ ತೆರಳುವುದಾಗಿ ಬೊಮ್ಮಾಯಿ ಮಂಗಳವಾರ ತಿಳಿಸಿದ್ದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವಂತೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ನಡೆಯದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಐಇ ಮೇಲೆ ಕೆಲ ದಿನಗಳಿಂದ ತೀವ್ರ ಒತ್ತಡವಿದೆ.
ಖಾಲಿ ಇರುವ ಆರು ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಂಪುಟ ವಿಸ್ತರಣೆ ಅಥವಾ ಕೆಲವರನ್ನು ಕೈಬಿಟ್ಟು ಸಮಾನ ಸಂಖ್ಯೆಯ ಹೊಸ ಮುಖಗಳನ್ನು ಸೇರಿಸಿಕೊಳ್ಳುವ ಮೂಲಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ವರದಿಗಳಿದ್ದರೂ, ಯಾವುದಕ್ಕೂ ಸ್ಪಷ್ಟನೆಯಿಲ್ಲ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement