ಒಟ್ಟಾರೆಯಾಗಿ ರೋಗಿಗಳಿಗೆ 18,000 ಕೋಟಿ ರೂ.ಗಳಷ್ಟು ಉಳಿಸಿದ ಜನೌಷಧಿ ಯೋಜನೆ: ಆರೋಗ್ಯ ಸಚಿವ ಮಾಂಡವಿಯಾ

ನವದೆಹಲಿ: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳು ರೋಗಿಗಳ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಇದು ಕಳೆದ 8 ವರ್ಷಗಳಲ್ಲಿ ನಾಗರಿಕರಿಗೆ 18,000 ಕೋಟಿ ರೂಪಾಯಿಗಳ ಉಳಿತಾಯಕ್ಕೆ ಸಹಾಯ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಮಾಂಡವಿಯಾ ಅವರು, ಎಲ್ಲರಿಗೂ ಉತ್ತಮ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಈ ಯೋಜನೆಯು ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೈಗೆಟುಕುವ ಗುಣಮಟ್ಟದ ಔಷಧಗಳನ್ನು ಸುಲಭವಾಗಿ ತಲುಪುವಂತೆ ಮಾಡುತ್ತದೆ. ದೇಶದಾದ್ಯಂತ 8,700 ಕ್ಕೂ ಹೆಚ್ಚು ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದ್ದು, ಬಹುತೇಕ ಪ್ರತಿ ಜಿಲ್ಲೆಗಳನ್ನು ಒಳಗೊಂಡಿದೆ. ಮಾರ್ಚ್ 2025 ರ ಅಂತ್ಯದ ವೇಳೆಗೆ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು ಹತ್ತು ಸಾವಿರದ ಐದು ನೂರಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement