ಕೆಜಿಎಫ್ ಬಾಬು ನಿವಾಸಕ್ಕೆ ಸಿ.ಎಂ. ಇಬ್ರಾಹಿಂ ಭೇಟಿ: ಜೆಡಿಎಸ್ ಸೇರ್ಪಡೆಯಾಗ್ತಾರೆಯೇ ಕೆಜಿಎಫ್ ಬಾಬು?

posted in: ರಾಜ್ಯ | 0

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕೆಜಿಎಫ್ ಬಾಬು (KGF Babu) ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೆಜಿಎಫ್ ಬಾಬುಗೆ ಜೆಡಿಎಸ್ ಸೇರ್ಪಡೆಗೊಳ್ಳುವಂತೆ ಸಿ.ಎಂ. ಇಬ್ರಾಹಿಂ ಆಹ್ವಾನ‌ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ತಾನೇ ಖುದ್ದು ಕಾರು ಕಳುಹಿಸಿ ತನ್ನದೇ ಕಾರಿನಲ್ಲಿ ಸಿ.ಎಂ. ಇಬ್ರಾಹಿಂರನ್ನು ಕೆಜಿಎಫ್ ಬಾಬು ಮನೆಗೆ ಕರೆಸಿಕೊಂಡಿದ್ದಾರೆ. ಬಾಬು ಆಹ್ವಾನದ ಹಿನ್ನೆಲೆಯಲ್ಲಿ ವಸಂತ ನಗರದ ಕೆಜಿಎಫ್ ಅವರ ನಿವಾಸಕ್ಕೆ ಇಬ್ರಾಹಿಂ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿರುವ ಕೆ.ಜಿ.ಎಫ್ ಬಾಬು ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವ ಹಿನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆರ್.ವಿ.ದೇವರಾಜು ಟಿಕೆಟ್ ಆಕಾಂಕ್ಷಿತರಾಗಿದ್ದಾರೆ. ಬಹುತೇಕ ಅವರಿಗೆ ಟಿಕೆಟ್ ನೀಡುವುದು ಖಚಿತ ಎನ್ನಲಾಗಿದೆ.
ಈ‌ ಬೆಳವಣಿಗೆಗಳ ನಡುವೆಯೇ ಕೆಜಿಎಫ್ ಬಾಬು ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಭೇಟಿ ನೀರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಕನಿಷ್ಠ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲು ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಈ‌ ಭೇಟಿಗೆ ಮಹತ್ವ ಬಂದಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ವಿದ್ಯಾರ್ಥಿಗಳೇ ಗಮನಿಸಿ...: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement