ಸಮಸ್ಯೆ ಹೇಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸೋಮಣ್ಣ…!

posted in: ರಾಜ್ಯ | 0

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.
ಶನಿವಾರ ಗ್ರಾಮದ ಗ್ರಾಮ ಪಂಚಾಯತದ ವತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6:30 ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಜನರು ಮುಗಿಬಿದ್ದರು. ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿ ಕಾರ್ಯಕ್ರಮ ಗೊಂದಲದ ಗೂಡಾಯಿತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಿವೇಶನದ ಹಕ್ಕು ಪತ್ರ ದೊರಕದವರು ಬಾಯಿಗೆ ಬಂದಂತೆ ಸಂಬಂಧಿಸಿದವರನ್ನು ನಿಂದಿಸಲಾರಂಭಿಸಿದರು. ಫಲಾನುಭವಿಗಳ ಆಯ್ಕೆಯನ್ನು ಸರಿಯಾಗಿ ಮಾಡಲಾಗಿಲ್ಲ. ನಿವೇಶನ ಇದ್ದವರಿಗೆ ಪುನಃ ನಿವೇಶನದ ಹಕ್ಕುಪತ್ರ ನೀಡಲಾಗಿದೆ ಎಂದು ಕೆಲವು ಮಹಿಳೆಯರು ಅಪಸ್ವರ ಎತ್ತಿದರು. ಕಾಂಗ್ರೆಸ್‌ ಮುಖಂಡರೊಬ್ಬರು ಹೇಳಿದವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು.

ನಮಗೆ ಅನ್ಯಾಯ ಮಾಡಲಾಗಿದೆ ಎಂದು ಮಹಿಳೆಯರು ಸಚಿವ ಸೋಮಣ್ಣ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಮಹಿಳೆಯೊಬ್ಬಳು ಸಚಿವರ ಬಳಿ ಸಮಸ್ಯೆ ಹೇಳಿಕೊಳ್ಳಲು ಹೋದಾಗ ವಸತಿ ಸಚಿವ ಸೋಮಣ್ಣ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯನ್ನು ಕರೆದೊಯ್ದು ಸಮಾಧಾನಪಡಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement