ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಮೂವರ ಬಂಧನ

ಬೆಳಗಾವಿ : ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಯನ್ನು ಅಮಾನುಷವಾಗಿ ಕೊಲೆಗೈಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಜ್ವಲ್ ಶಿವಾನಂದ ಕರೆಗಾರ (16 ವರ್ಷ) ಎಂಬ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮೂರು  ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆ ಅಪರಾಧ ಪ್ರಕರಣ ದಾಖಲಾಗಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ಯಾಂಪ್ ಪೊಲೀಸ್‌ಇನ್ಸ್ಪೆಕ್ಟರ್‌ಮತ್ತು ತಂಡದವರು ಪ್ರಕರಣದ ತನಿಖೆ ಆರಂಭಿಸಿದ್ದರು. ತನಿಖೆಯ ಜಾಡು ಹಿಡಿದ ಪೊಲೀಸರು ಕೊಲೆ ಆರೋಪದ ಮೇಲೆ ಲಕ್ಷ್ಮಣ ಯಲ್ಲಪ್ಪಾ ಹೊಸಮನಿ (19 ವರ್ಷ) ಖನಗಾಂವ ಬಿ.ಕೆ. ಎಂಬಾತ ಹಾಗೂ ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಮತ್ತು ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement